TRENDING
Next
Prev

ನಟಿ ತಮನ್ನಾ ಭಾಟಿಯಾಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಬಾಹುಬಲಿ ಖ್ಯಾತಿಯ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮನ್ನಾ ಅಲ್ಲದೇ ಅವರ ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಕೂಡ ಸೋಂಕು ಇರುವುದು ಬೆಳಕಿಗೆ ಬಂದಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

READ ALSO

ಹೈದರಾಬಾದ್ ನಲ್ಲಿ ವೆಬ್ ಸರಣಿ ಚಿತ್ರಕ್ಕಾಗಿ ಕೆಲವು ದಿನಗಳಿಂದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ತಮನ್ನಾ ಭಾಟಿಯಾ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ತಮನ್ನಾ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು, ಕೆಲವು ದಿನಗಳಿಂದ ತಮ್ಮ ಸಂಪರ್ಕದಲ್ಲಿ ಇದ್ದವರು ಮುನ್ನೆಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.