ನಿವೃತ್ತ ಶಿಕ್ಷಕನಿಂದ ಬಂಗಾರಪೇಟೆ ತಹಶೀಲ್ದಾರರ ಮರ್ಡರ್! ಆರೋಪಿ ವೆಂಕಟಪತಿ ಪೋಲೀಸ್ ವಶಕ್ಕೆ

ಬಂಗಾರಪೇಟೆ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

READ ALSO

ತೀವ್ರ ತರದ ಗಾಯವಾದ ತಹಶೀಲ್ದಾರ್ ಗೆ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಜಿಲ್ಲೆಯ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ತಹಶೀಲ್ದಾರ್ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತ ತಹಶೀಲ್ದಾರ್ ತುಮಕೂರು ಜಿಲ್ಲೆಯ ಮಧುಗಿರಿ ಮೂಲದವರಾಗಿದ್ದಾರೆ.

ಬಂಗಾರಪೇಟೆ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿ ನಿವೃತ್ತ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಬಂಧಿಸಿದ್ದಾರೆ.