ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೂರಂಗಾಗಿ ಪಟಾಕಿ ಸಾಮಗ್ರಿಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು.

ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ಇಂದು ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ (Firecracker Explosion) 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿದ ತಿರುವಾಂಬಾಡಿ ದೇವಸ್ಥಾನದ ಬಳಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಇಡೀ ಊರನ್ನು ಆವರಿಸಿತು.

ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಕನಿಷ್ಠ 40 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು .ಪೂರಂಗಾಗಿ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೂರಂಗಾಗಿ ಪಟಾಕಿ ಸಾಮಗ್ರಿಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು. ಸ್ಥಳಕ್ಕೆ ತುರ್ತು ಸೇವೆಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಫೋಟದ ನಿಖರವಾದ ಕಾರಣವನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಟಾಕಿ ಸ್ಫೋಟದಲ್ಲಿ ಗಾಯಗೊಂಡವರಿಗೆ ತಕ್ಷಣ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ನಿರ್ದೇಶಿಸಿದ್ದಾರೆ. ಅವರ ಚಿಕಿತ್ಸೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಅಗತ್ಯವಿರುವ ವ್ಯವಸ್ಥೆಗಳನ್ನು ಮಾಡಬೇಕೆಂದು ಅವರು ಸೂಚನೆ ನೀಡಿದ್ದಾರೆ.

ಇಂದು ಮಧ್ಯಾಹ್ನ 3.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಹಲವಾರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ವಿವಿಧ ಸ್ಥಳಗಳಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ. 18 ಜನರನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ