ತಮಿಳುನಾಡು: ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!

ತಮಿಳುನಾಡು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಿಪಿನ್ ರಾವತ್ ದಂಪತಿ ಸೇರಿದಂತೆ ನಾಲ್ವರು ಅಧಿಕಾರಿಗಳು ಹಾಗೂ 14 ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು.

READ ALSO

ಸೇನಾ ಹೆಲಿಕಾಫ್ಟರ್ ದುರಂತಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಶಂಕಿಸಲಾಗಿದ್ದು, ಬಿಪಿನ್ ರಾವತ್ ಸೇರಿದಂತೆ ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದು, ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಜಾಗದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಗುರುಸೇವಕ್, ವಿವೇಕ್ ಕುಮಾರ್ ಮೃತಪಟ್ಟ ಇಬ್ಬರನ್ನು ಗುರುತಿಸಲಾಗಿದೆ.