ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುತ್ತಿದ ಆರೋಪಿಯ ಬಂಧನ, ಬಂಧಿತ ಆರೋಪಿಗಿದೆ ಮತಾಂತರ ಹಿನ್ನೆಲೆ

ಮಂಗಳೂರು: ಕೊರಗಜ್ಜನ ಕಟ್ಟೆಗಳು, ದೇವಸ್ಥಾನಗಳು, ದೈವಸ್ಥಾನಗಳು, ನಾಗನ ಕಟ್ಟೆಗಳು, ದರ್ಗಾ ಸಹಿತ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ ಪ್ರಕರಣಗಳನ್ನು ಮಂಗಳೂರು ನಗರ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ ಉಣ್ಕಲ್ ಮೂಲದ, ಮಂಗಳೂರಿನ ಕೋಟೆಕಾರು ಕೊಂಡಾಣ‌ ನಿವಾಸಿ ದೇವದಾಸ್ ದೇಸಾಯಿ(62) ಬಂಧಿತ ಆರೋಪಿ. ಸೋಮವಾರ ರಾತ್ರಿ ಅತ್ತಾವರ ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆಯಲ್ಲಿ ಕಾಂಡಂ ಇರಿಸಿ ಅಪಚಾರ ಎಸಗಿದ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಇಷ್ಟು ಪ್ರಕರಣಗಳ ಸುಳಿವು ಲಭಿಸಿತ್ತು.

ಆರೋಪಿ ಕ್ರಿಶ್ಚಿಯನ್ ಧರ್ಮದವನಾಗಿದ್ದು, “ಭೂಮಿ ಅಂತ್ಯವಾಗುವ ಸಮಯ ಬಂದಿದೆ. ದೇವರು ನಮ್ಮನ್ನು ರಕ್ಷಿಸಬೇಕಾದರೆ, ಆತನೇ ಶ್ರೇಷ್ಠ ಎಂದು ಸಾರಬೇಕಾಗಿದ್ದು, ಅದಕ್ಕಾಗಿ ಈ ಕೃತ್ಯ ಎಸಗಿದ್ದೇನೆ. ಇದಕ್ಕೆ ಪಶ್ಚಾತಾಪ ಇಲ್ಲ” ಎಂದು ತಿಳಿಸಿದ್ದಾನೆ.

ಆರೋಪಿ ದೇವದಾಸ್‌ನ ತಂದೆ ಜಾನ್ ದೇಸಾಯಿ ಹಿಂದು ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈತ ಕೂಡ ಕ್ರೈಸ್ತ ಧರ್ಮವನ್ನು ಪಾಲಿಸುತ್ತಿದ್ದು, ಮಂಗಳೂರಿನಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದಾನೆ. ಧಾರ್ಮಿಕ ಕೇಂದ್ರಗಳ ಸಮೀಪ ಕಾಂಡಂ, ಕ್ರೈಸ್ತ ಧರ್ಮದ ಭಿತ್ತಿಪತ್ರಗಳನ್ನು ಹಾಕುತ್ತಿದ್ದುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ.

ಪಾಂಡೇಶ್ವರ ಠಾಣೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು. ಆತ ಮಾನಸಿಕ ಅಸ್ವಸ್ಥತನಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Spread the love
  • Related Posts

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    You Missed

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 55 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 24 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 588 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 144 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ