ಇಂದು ಸಂಪುಟ ವಿಸ್ತರಣೆ ಬಹುತೇಕ ಖಚಿತ! ಇಂದು ಆಗುತ್ತಾ 15 ಸಚಿವರ ಪ್ರಮಾಣವಚನ?

ಬೆಂಗಳೂರು: ಸಂಪುಟ ವಿಸ್ತರಣೆ ಪಟ್ಟಿಗೆ ಅಂತಿಮ ಸ್ವರೂಪ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಬುಲಾವ್‌ ಬಂದಿದ್ದು, ನಿನ್ನೆ ಸಂಜೆ ಅವರು ದಿಲ್ಲಿಗೆ ತೆರಳಿದ್ದಾರೆ. ಪ್ರವಾಹ, ಕೋವಿಡ್‌ ನಿರ್ವಹಣೆ ಹಿನ್ನೆಲೆಯಲ್ಲಿ’ಎಮರ್ಜೆನ್ಸಿ ಕ್ಯಾಬಿನೆಟ್‌’ ರಚನೆಗೆ ಹೈಕಮಾಂಡ್‌ನಿಂದ ತಕ್ಷಣ ಸಮ್ಮತಿ ದೊರಕುವ ನಿರೀಕ್ಷೆಯಿದ್ದು, ನೂತನ ಸಚಿವರು ನಾಳೆ ಸಂಜೆಯೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ದಿಲ್ಲಿ ನಿರ್ಧಾರ ವಿಳಂಬವಾದರೆ ಇದು ಬುಧವಾರಕ್ಕೆ ಮುಂದೂಡಿಕೆ ಆಗಬಹುದು. 

ಜಾತಿ, ಪ್ರಾದೇಶಿಕ ಪ್ರಾತಿನಿಧ್ಯ ಒಳಗೊಂಡು ಸಾಮಾಜಿಕ ನ್ಯಾಯದಡಿ ಸಂಪುಟ ರಚಿಸಲು ಹೈಕಮಾಂಡ್‌ ಯೋಚಿಸಿದೆ. ಸಿಎಂ ಬೊಮ್ಮಾಯಿ ಕೂಡ ಈ ನಿಟ್ಟಿನಲ್ಲಿ ಆಲೋಚನೆ ಮಾಡಿದ್ದಾರೆ. 5 ರಿಂದ 10 ಸ್ಥಾನ ಖಾಲಿ ಉಳಿಸಿಕೊಂಡು ಉಳಿದ ಸ್ಥಾನ ಭರ್ತಿ ಮಾಡಲು ಸಿಎಂ ಬಯಸಿದ್ದಾರೆ. ಆದರೆ ‘ಈ ಬಾರಿ 12ರಿಂದ 15 ಸಚಿವರ ನೇಮಕ ಸಾಕು. ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದ ವಿಸ್ತರಣೆ ಕೈಗೊಳ್ಳುವುದು ಉತ್ತಮ’ ಎನ್ನುವುದು ಹೈಕಮಾಂಡ್‌ ನಿಲುವಾಗಿದೆ ಎನ್ನಲಾಗಿದೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಮುಖ್ಯಮಂತ್ರಿಯವರು ಸೋಮವಾರ ಭೇಟಿ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೂ ಮಾತುಕತೆ ನಡೆಯಲಿದೆ. ಸಂಭಾವ್ಯ ಸಚಿವರ ಪಟ್ಟಿಯನ್ನು ಅವರು ಕೊಂಡೊಯ್ದಿದ್ದಾರೆ. ಇದಕ್ಕೆ ಮುನ್ನ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದ್ದಾರೆ. ಬಿಎಸ್‌ವೈ ಕೂಡ ತಮ್ಮ ಆಪ್ತರಲ್ಲಿ ಕೆಲವರ ಹೆಸರು ಶಿಫಾರಸು ಮಾಡಿರುವ ಸಾಧ್ಯತೆ ಇರುತ್ತದೆ. ಇದರ ಹೊರತಾಗಿ ಹೈಕಮಾಂಡ್‌ ಅಪೇಕ್ಷೆಯೇನಿದೆ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. 

ನೂತನ ಸಚಿವರ ಪ್ರಮಾಣದ ವಚನದ ಬಗ್ಗೆ ಯಾವುದಕ್ಕೂ ತಯಾರಾಗಿರುವಂತೆ ಮುಖ್ಯ ಕಾರ್ಯದರ್ಶಿ ಕಾರ್ಯಾಲಯದಿಂದ ಶಿಷ್ಟಾಚಾರ ವಿಭಾಗಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ