ನಾಡಿನ ವಿವಿಧೆಡೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥರ ಪುಣ್ಯ ಸಂಸ್ಮರಣೆ ಕಾರ್ಯಕ್ರಮ

ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ
ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಪುಣ್ಯಸ್ಮರಣೆಯನ್ನು ನಾಡಿನ ವಿವಿಧ ಸ್ಥಳಗಳಲ್ಲಿ ಆಚರಿಸಲಾಯಿತು.

ದಕ್ಷಿಣಕನ್ನಡ ಜಿಲ್ಲೆಯ ಕೇಮಾರಿನಲ್ಲಿ ಶ್ರೀ ಸಾಂದಿಪಿನಿಮಠದ ಶ್ರೀ ಈಶವಿಠಲದಾಸ ಸ್ವಾಮೀಜಿಯವರು ತಮ್ಮ ಮಠದಲ್ಲಿ ಶ್ರೀ ವರದನಾರಾಯಣ, ಮೂಕಾಂಬಿಕಾ, ಹಾಗೂ ಶಾಲಗ್ರಾಮ ಸನ್ನಿಧಿಗೆ ವಿಶೇಷ ಅಭಿಷೇಕ ಹಾಗೂ ಮಹಾಪೂಜೆ ಸಲ್ಲಿಸಿದರು. ನಂತರ ಶ್ರೀ ಲಕ್ಷ್ಮೀವರತೀರ್ಥ
ಶ್ರೀಪಾದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ
ನುಡಿನಮನ ಸಲ್ಲಿಸಲಾಯಿತು.

ಕಿರಿ ಮಂಜೇಶ್ವರದ ಹೊಸಹಿತ್ಲು ಸಮುದ್ರ ಕಿನಾರೆಯಲ್ಲಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರಾದ ಉದಯ್ ಎಂ ಶ್ರೀಯಾನ್, ಕೋಶಾಧಿಕಾರಿ ವೆಂಕಟೇಶಪೂಜಾರಿ, ನಿಕಟಪೂರ್ವ ಅಧ್ಯಕ್ಷ ವಿಜಯ್ ಯೆಮ್ ಚಂದ್ರನ್,ಹಾಗೂ ಊರಿನವರು ಶ್ರೀಶಿರೂರು ಶ್ರೀಪಾದರ ಸ್ಮರಣಾರ್ಥ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು.

ಉಡುಪಿಯ ಪರಿಯಾಳ ಸಮುದಾಯದ ಜಿಲ್ಲಾ.ಪ.ಸ.ಸು.ಸಂಘದ ವತಿಯಿಂದ ನಮನಗಳನ್ನು ಸದಸ್ಯರು ಅರ್ಪಿಸಿದರು.

ಮುಂಬೈನ ವಿ.ಮೋಹನ್ ಮತ್ತು ಕುಟುಂಬಿಕರು ಮುಂಬೈಯಲ್ಲಿನ ತಮ್ಮ ಬಂಧುಮಿತ್ರರ ಜೊತೆ ಸೇರಿ ಪುಷ್ಪ ನಮನ ಸಲ್ಲಿಸಿದರು.

ಬೆಂಗಳೂರಿನ ಶ್ರೀಕೃಷ್ಣ ಟೂರ್ಸ್ ಆಂಡ್ ಟ್ರಾವೆಲ್ಸ್ ನ ಶ್ರೀನವೀನ ಅವರಿಂದ ಸ್ವಗೃಹದಲ್ಲಿ ವಿಶೇಷ ಪುಷ್ಪಾರ್ಚನೆ ಕಾರ್ಯಕ್ರಮ ಜರಗಿತು.

ಉಡುಪಿಯಲ್ಲಿ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಸಹೋದರರು ಮತ್ತು ಬಂಧುಗಳು ತಮ್ಮ ವಠಾರದಲ್ಲಿ ಶ್ರೀಪಾದರ ಭಾವ ಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ನಡೆಸಿ ಪುಣ್ಯಸ್ಮರಣೆಗೈದು ಪುಣ್ಯ ದಿನವನ್ನು ಆಚರಿಸಿದರು.
ಅಷ್ಟೇ ಅಲ್ಲದೆ ಶಿರೂರು ಅಭಿಮಾನಿ ಬಳಗದ ಸದಸ್ಯರು ಹಾಗೂ ನಾಡಿನಾದ್ಯಂತ ಶ್ರೀಪಾದರ ಬಹುತೇಕ
ಶಿಷ್ಯವೃಂದದವರು ಭಾನುವಾರದ ಲಾಕ್ ಡೌನ್ ನಿಮಿತ್ತ ಸ್ವಗೃಹದಲ್ಲೇ ಕುಟುಂಬಿಕರು ಹಾಗೂ ಸ್ನೇಹಿತರ ಜೊತೆ ಸೇರಿ ಶ್ರೀಪಾದರ ಪುಣ್ಯಸ್ಮರಣೆಯನ್ನು ಆಚರಿಸಿದರು.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 283 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 316 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 111 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ