ರಾಜ್ಯದಲ್ಲಿ ಇಂದಿನಿಂದ ನಡೆಯಲಿದೆ SSLC ಪರೀಕ್ಷೆ ವಿದ್ಯಾರ್ಥಿಗಳು ಆತಂಕಪಡದೆ ನಿರಾತಂಕವಾಗಿ ಪರೀಕ್ಷೆ ಬರೆಯಿರಿ ‘ಭಯ ಬೇಡ ಜಾಗೃತಿ ಇರಲಿ’

ಬೆಂಗಳೂರು: ಕೊರೊನಾತಂಕದ ನಡುವೆಯೇ ರಾಜ್ಯದಲ್ಲಿ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ‌ನಡೆಯಲಿದೆ.

ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದೋಷರಹಿತವಾಗಿ ಪರೀಕ್ಷೆ ನಡೆಸಲು ಜುಲೈ 3 ರವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿಗೆ ತಂದು ನಗರ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳ ಸೈಬರ್ ಕೇಂದ್ರಗಳು ಹಾಗೂ ಜೆರಾಕ್ಸ್ ಅಂಗಡಿಗಳು ಬಂದ್ ಆಗಲಿವೆ. ಐದಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರುವಂತಿಲ್ಲ. ಕೇಂದ್ರದ ಸುತ್ತಮುತ್ತಲು ಪ್ರತಿಭಟನೆ, ಮೆರವಣಿಗೆ ಸಭೆ ಮಾಡುವಂತಿಲ್ಲ. ನಿಯಮ ಉಲ್ಲಂಘನೆ ಕಂಡುಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ‌ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಕಮೀಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ.ಹಲವು ಅಡೆತಡೆಗಳ ಮಧ್ಯೆ ಪರೀಕ್ಷೆ ನಡೆಯಲಿದ್ದು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 81,265 ಅಧಿಕಾರಿಗಳು, ಸಿಬ್ಬಂದಿ ಜತೆಗೆ ಗೃಹ ಇಲಾಖೆ, ಪೊಲೀಸ್, ಇತರೆ ಸಿಬ್ಬಂದಿ ಸೇರಿ 1.5 ಲಕ್ಷ ಜನರು ಕಾರ್ಯನಿರ್ವಹಿಸಲಿದ್ದಾರೆ. ಎಲ್ಲಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಬೆಳಗ್ಗೆ 7ರಿಂದಲೇ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ಇರಲಿದ್ದು ಸೂಕ್ತ ಮುಂಜಾಗ್ರತ ಕ್ರಮಗಳನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 283 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 316 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 111 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ