ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

ಸುರತ್ಕಲ್: ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ.

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ.

ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಆರೋಪಿಸಿದ್ದಾರೆ.

ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಂತೆ, ಇದೀಗ ಪ್ರಕರಣ ತಿರುಚಲು ಹಾಗೂ ಏನೂ ಆಗಿಲ್ಲವೆಂಬತೆ ಮಾಡಲು ಮೊಬೈಲ್ ಅದಲು ಬದಲು ಮಾಡಲಾಗಿದೆ ಎಂಬ ಸಂಶಯ ಜನರಲ್ಲಿ ಉಂಟಾಗಿದೆ. ಮೊದಲು ಇದಕ್ಕೆ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ.

ಉಡುಪಿ ಪೊಲೀಸರು ಘಟನೆ ನಡೆದಿರುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ದಿಢೀರ್ ಆಗಿ ವಿದ್ಯಾರ್ಥಿನಿಯರನ್ನು ವಜಾ ಗೊಳಿಸಲು ಕಾರಣ ಏನು, ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವಿಲ್ಲ. ಕೇರಳ ಮೂಲದ ವಿದ್ಯಾರ್ಥಿಗಳಾಗಿರುವುದರಿಂದ ಲವ್ ಜಿಹಾದ್ ಸಹಿತ, ವಿವಿಧ ವಿದ್ವಂಸಕ ಕೃತ್ಯ ಎಸಗಲು
ಇದೊಂದು ಬ್ಲ್ಯಾಕ್ ಮೈಲ್ ಷಡ್ಯಂತ್ರವಾಗಿರುವ ಸಾಧ್ಯತೆಯಿದೆ ಎಂದು ಶಾಸಕರು ಸಂಶಯ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುವ ಬದಲು ಉಡಾಫೆಯಾಗಿ ವರ್ತಿಸಿದರೆ ಮುಂದೊಂದು ದಿನ ಕಂಟಕಪ್ರಾಯವಾಗಬಹುದು.
ಇದರ ಹಿಂದೆ ನಿಷೇಧಿತ ಸಂಘಟನೆ ಪಿ ಎಫ್ ಐ ಕೈವಾಡ ಇದ್ದರೆ ತನಿಖೆ ನಡೆಸಿ, ಹಿಂದೂ ಸಮುದಾಯದ ಯುವತಿಯರು ಬಲಿಪಶುವಾಗದಂತೆ ರಕ್ಷಣೆಯನ್ನು ನೀಡುವ ಕೆಲಸ ಮೊದಲು ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಟ್ವೀಟ್ ಮಾಡಿ ಸರಕಾರ, ತನಿಖಾ ಇಲಾಖೆ ಹಾಗೂ ಸಾರ್ವಜನಿಕ ರನ್ನು ಎಚ್ಚರಿಸುವ ಕೆಲಸ ಮಾಡಿದ ಮಾತ್ರಕ್ಕೆ, ರಾತ್ರಿ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಾಗದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ, ಭಾರತೀಯ ಜನತಾ ಪಕ್ಷಯ ಭದ್ರ ಕೋಟೆಯಾಗಿರುವ ಕರಾವಳಿ ಭಾಗವನ್ನು ಗುರಿಯಾಗಿಸಿ ಇರಿಸಿಕೊಂಡು ಹಿಂದೂ ಕಾರ್ಯಕರ್ತರ ಗಡಿಪಾರು, ಸುಳ್ಳು ಕೇಸುಗಳನ್ನು ದಾಖಲಿಸಲು ಪೂರ್ವ ತಯಾರಿ ನಡೆಸಿದೆ.

ಇದರ ಮುಂದುವರಿದ ಭಾಗವಾಗಿ ಟ್ವೀಟ್ ಮಾಡಿದ ರಶ್ಮಿ ಸಮಂತ ಅವರನ್ನು ಕೂಡ ತನಿಖೆ ನೆಪದಲ್ಲಿ ಪ್ರಕರಣ ದಾಖಲಿಸಿ, ಇಡೀ ಪ್ರಕರಣವನ್ನು ತಿರುಚಲು ಮುಂದಾಗಿರುವಂತಿದೆ.
ಜಿಲ್ಲೆಯಲ್ಲಿ ಹಾಗೂ ಕರಾವಳಿಯಲ್ಲಿ ಸಂಘರ್ಷಮಯ ವಾತಾವರಣಕ್ಕೆ ಸರಕಾರ ಎಡೆ ಮಾಡಿಕೊಡಬಾರದು. ದ್ವೇಷ ರಾಜಕಾರಣದಿಂದ ಕಾನೂನು ಹದೆಗೆಟ್ಟಲ್ಲಿ ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೇ ಜವಾಬ್ದಾರಿಯಾಗಲಿದೆ
ಎಂದು ಡಾ. ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ