ರಾಜ್ಯದಲ್ಲಿ ತಾಲೂಕು ಪಂಚಾಯ್ತಿ ರದ್ದಿಗೆ ಚಿಂತನೆ: ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಿ, ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ವೆಂಕಟರಾವ್ ನಾಡಗೌಡ ಪ್ರಶ್ನೆಗೆ ಉತ್ತರಿಸಿದಂತ ಅವರು, ಕೇಂದ್ರ ಕಾನೂನಿನ ಮೂಲಕ ರಾಜ್ಯದಲ್ಲಿ ಮೂರು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿಯಲ್ಲಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗಳ ಪೈಕಿ ತಾಲೂಕು ಪಂಚಾಯ್ತಿ ಬೇಕಿಲ್ಲ. ಹೀಗಾಗಿ ರಾಜ್ಯದಲ್ಲಿ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ಹೇಳಿದ್ದಾರೆ.

READ ALSO

ತಾಲೂಕು ಪಂಚಾಯ್ತಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ 3 ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಭಾವನೆ ಬಹುತೇಕರಲ್ಲಿದೆ. ಗಮನಾರ್ಹ ಅಂಶವೆಂದ್ರೇ, ಈ ಬಾರಿ ಬಹುತೇಕರು ತಾಲೂಕು ಪಂಚಾಯ್ತಿಯಲ್ಲಿ ಏನೂ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದರು.