ಕರ್ನಾಟಕದಲ್ಲಿ KSRTC ಗೆ “ಟ್ರೇಡ್‌ ಮಾರ್ಕ್” ಸಂಕಷ್ಟ! KSRTC ಇನ್ಮುಂದೆ ಕೇರಳದ ಪಾಲು

ಕಾಸರಗೋಡು: KSRTC ಎಂಬ ಹೆಸರನ್ನು ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ ಬಳಸುವಂತಿಲ್ಲ. ರಾಜ್ಯ ಸಾರಿಗೆ ಸಂಸ್ಥೆಗೆ ಕೇಂದ್ರ ‘ಟ್ರೇಡ್‌ ಮಾರ್ಕ್ ರಿಜಿಸ್ಟ್ರಿ’ ಇಂಥ ಶಾಕ್‌ ನೀಡಿದೆ. 7 ವರ್ಷಗಳ ಕಾನೂನು ಹೋರಾಟದಲ್ಲಿ KSRTC ಎನ್ನುವ ಹೆಸರು ಮತ್ತು ಲಾಂಛನವನ್ನು ತನ್ನ ಕೈ ವಶ ಮಾಡಿಕೊಳ್ಳುವಲ್ಲಿ ಕೇರಳ ಸಾರಿಗೆ ಸಂಸ್ಥೆ ಯಶಸ್ವಿಯಾಗಿದೆ.

ಎರಡು ರಾಜ್ಯಗಳ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಕೆಎಸ್ಸಾರ್ಟಿಸಿ ಎಂಬ ಹೆಸರಿನ ಪ್ರಯೋಗ ವರ್ಷಗಳಿಂದಲೇ ಚಾಲ್ತಿಯಲ್ಲಿತ್ತು. ಆದರೆ ಇದು ಕರ್ನಾಟಕದ್ದು ಮಾತ್ರ ಎಂಬುದಾಗಿ 2014ರಲ್ಲಿ ಕರ್ನಾಟಕ ಸಾರಿಗೆ ಕೇರಳಕ್ಕೆ ನೋಟೀಸ್‌ ನೀಡಿತ್ತು. ಆದರೆ ಕೇರಳ ಸಾರಿಗೆ ಸಂಸ್ಥೆ ಕೇಂದ್ರ ಸರಕಾರದ ‘ಟ್ರೇಡ್‌ ಮಾರ್ಕ್ ರಿಜಿಸ್ಟ್ರಿ’ಗೆ ಅರ್ಜಿ ಸಲ್ಲಿಸಿ ಅದು ತನಗೆ ಸೇರಿದ್ದೆಂದು ವಾದಿಸಿತ್ತು.

ಇದನ್ನು ಪುರಸ್ಕರಿಸಿರುವ ಭಾರತ ಸರಕಾರದ ಟ್ರೇಡ್‌ಮಾರ್ಕ್ ನೋಂದಣಿ ಪ್ರಾಧಿಕಾರ, ಸಾರಿಗೆ ಬಸ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಪದನಾಮ ಮತ್ತು ಲಾಂಛನವು ಕೇರಳಕ್ಕೆ ಮಾತ್ರ ಸೀಮಿತವೆಂದು ಆದೇಶಿಸಿದೆ. ಇದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತನ್ನ ಹೆಸರನ್ನು ಬದಲಿಸಬೇಕಾದ ಸ್ಥಿತಿ ಎದುರಾಗಿದೆ. ಜತೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್‌ಗಳು, ನಿಲ್ದಾಣಗಳು ಹಾಗೂ ಕಚೇರಿಗಳೂ ಸೇರಿದಂತೆ ಇತರೆಡೆ ಬಳಸಿರುವ ಕೆಎಸ್‌ಆರ್‌ಟಿಸಿ ಹೆಸರು, ಲಾಂಛನವನ್ನು ತೆಗೆಯಬೇಕಾಗಿದೆ.

ತಿರುವಾಂಕೂರು ರಾಜ್ಯ ಸಾರಿಗೆ ಇಲಾಖೆ (ಟಿಎಸ್‌ಟಿಡಿ) ರಚನೆಯಾದಾಗ ಬ್ರಿಟಿಷ್ ರಾಜನ ಅವಧಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು 1965 ರಲ್ಲಿ ರಚಿಸಲಾಯಿತು. ಕರ್ನಾಟಕವು ಕೆಎಸ್‌ಆರ್‌ಟಿಸಿ ಹೆಸರನ್ನು 1973 ರಿಂದ ಬಳಸಲಾರಂಭಿಸಿತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಟ್ರೇಡ್​ ರಿಜಿಸ್ಟ್ರಿ ಕೇರಳದ ಪರ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸಾರಿಗೆ ಇಲಾಖೆ, ರಾಜ್ಯ ಸಾರಿಗೆ ಇಲಾಖೆಗೆ ಇನ್ಮುಂದೆ ಕೆಎಸ್​ಆರ್​​ಟಿಸಿ ಎಂದು ಬಳಸಬೇಡಿ ಎಂದು ನೋಟಿಸ್ ಜಾರಿಗೊಳಿಸಲು ನಿರ್ಧರಿಸಿದೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು