ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ ಮನೆ ಸಮೀಪ ಇದ್ದ ಮರ ತೆರವುಗೊಳಿಸುವ ವೇಳೆ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.

ಮನೆಯ ಸಮೀಪದಲ್ಲಿದ್ದ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿದ್ದಾರೆ.

READ ALSO

ಮೃತರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ (21 ವ), ಸೇಸಪ್ಪ ಪೂಜಾರಿ ಅವರ ಪುತ್ರ ಸ್ವಸ್ತಿಕ್ (23 ವ) ಮತ್ತೋರ್ವ ಗಣೇಶ ಎಂದು ತಿಳಿದುಬಂದಿದೆ.

ಅನಾರು ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರವನ್ನು ಕಡಿದು ಉರುಳಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತನಿರೀಕ್ಷಕರಾದ ಸಂದೇಶ್ ಪಿ.ಜಿ., ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕರಾದ ಪವನ್ ಕುಮಾರ್, ಸಿಬಂದಿ ಭೇಟಿ ನೀಡಿದ್ದಾರೆ.