ತುಳುನಾಡಿನ ದೈವಾರಾಧನೆ, ನೇಮ ಮುಂತಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ!

ಮಂಗಳೂರು: ತುಳುನಾಡಿನ ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ಜನರ ಮಿತಿಯಲ್ಲಿ ತುಳುನಾಡಿನಲ್ಲಿ ಧಾರ್ಮಿಕ ಕಾರ್ಯ ನಡೆಸಲು ಅನುಮತಿ ನೀಡಿ ಮುಖ್ಯಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ಈ ಆದೇಶ ಇನ್ನಷ್ಟೇ ಜಾರಿಗೆ ಬರಬೇಕಿದೆ.

ಕೋವಿಡ್‌-೧೯ ನಿಂದಾಗಿ ದೇಶದಾದ್ಯಂತ ಆದ ಲಾಕ್‌ಡೌನ್‌ನಿಂದಾಗಿ ಜನರ ಸಾಮಾಜಿಕ, ಧಾರ್ಮಿಕ ಆಚರಣೆಗೂ ಧಕ್ಕೆ ಉಂಟಾಗಿರುತ್ತದೆ. ಹಾಗೆಯೇ ಉಡುಪಿ ಜಿಲ್ಲೆಯ ತುಳುನಾಡಿನ ಸಂಸ್ಕೃತಿಯಂತೆ ವರ್ಷಂಪ್ರತಿ ದೈವ ನೇಮೋತ್ಸವ, ಮಾರಿಪೂಜೆ, ನಾಗಾರಾಧನೆ ಮುಂತಾದ ಧಾರ್ಮಿಕ ಸೇವಾ ಕೈಂಕರ್ಯಗಳು ನಡೆಯುತ್ತಲಿರುವುದು ಸರ್ವವಿಧಿತ. ಆದರೆ ಈ ಬಾರಿ ಲಾಕ್ ಡೌನ್ ನಿಂದಾಗಿ ಧಾರ್ಮಿಕ ಸೇವೆಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ನಿಷೇಧವಿದ್ದುದರಿಂದ ಧಾರ್ಮಿಕ ಭಾವನೆಗೆ ಘಾಸಿ ಉಂಟಾಗಿದ್ದಲ್ಲದೇ ದೈವ ಪರಿಚಾರಕರಾದ ನಾಗಸ್ವರ ವಾದಕರು, ಮಡಿವಾಳ, ದರ್ಶನಪಾತ್ರಿ, ಮದ್ಯಸ್ಥರು, ಗರೋಡಿ ವರ್ಗದವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿದಂತೆ ಹಲವಾರು ವರ್ಗದವರ ಆರ್ಥಿಕ ಸ್ಥಿತಿ ಹದಗೆಟ್ಟಿದೆ.

ಆದುದರಿಂದ ತುಳುನಾಡಿನ ದೈವರಾಧನೆ, ಮುಂತಾದ ಧಾರ್ಮಿಕ ಕೈಂಕರ್ಯ ನಡೆಸಲು ೧೦೦ ಜನ ಮೀರದಂತೆ ನಡೆಸಲು ಅವಕಾಶ ನೀಡಬೇಕೆಂದು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ರಘುಪತಿ ಭಟ್‌ ಮನವಿ ಸಲ್ಲಿಸಿದ್ದರು. ಅಲ್ಲದೇ ದೈವ ಪರಿಚಾಕರಿಗೆ ಆರ್ಥಿಕ ಪರಿಸ್ಥಿತಿ ಸುಧಾರಿಸಲು ತಲಾ ೧೦ ಸಾವಿರ ಅನುದಾನ ಮಂಜೂರು ಮಾದುವಂತೆಯೂ ಮನವಿಯಲ್ಲಿ ಕೋರಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ