ದೈವದ ಫೋಟೋ, ವಿಡೀಯೋ ತೆಗೆಯುವವರೇ ಎಚ್ಚರ! – ಕಾನೂನಿನ ಕುಣಿಕೆಗೆ ಬೀಳುವ ದುಸ್ಸಾಹಸ ಮಾಡದಿರಿ!

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸಮಾಜದ ಒಂದು ವರ್ಗ ತುಳುನಾಡಿನ ಪವಿತ್ರ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ ಅಸಂಖ್ಯಾತ ದೈವ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ತುಳುನಾಡ್ ಕುಡ್ಲ ಸಂಘಟನೆಯು ಮಂಗಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ದೈವ ನಂಬಿಕೆಗೆ ಚ್ಯುತಿ ತರುತ್ತಿರುವ ಘಟನೆಗಳು ಪುನರಾವರ್ತನೆಯಾಗುತ್ತಿರುವ ಬೆನ್ನಲ್ಲೇ ಯುವ ತುಳುನಾಡ್ ಕುಡ್ಲ(ರಿ) ಸಂಘಟನೆ ಕಾನೂನಿನ ಮೂಲಕ ಪಾಠ ಕಲಿಸುವ ದಾರಿ ತುಳಿದಿದೆ. ನಂಬಿಕೆಗೆ ಘಾಸಿ ಮಾಡುವವರ ವಿರುದ್ಧ ಯುವ ತುಳುನಾಡ್ ಕುಡ್ಲ ಸಂಘಟನೆ ಕಾನೂನಿನ ಸಮರ ಸಾರಿದೆ.

ದೈವದ ಫೋಟೋಗಳನ್ನು ಬಳಸಿ ಅಸಭ್ಯವಾಗಿ ಎಡಿಟ್ ಮಾಡುವುದು, ನಂಬಿಕೆಗೆ ನೋವುಂಟು ಮಾಡುವ ರೀತಿಯ ಕಲ್ಪನೆಯ ಚಿತ್ರಗಳನ್ನು ಬಿಡಿಸುವುದು, ಸಿನೇಮಾ ಚಿತ್ರದ ಹಾಡುಗಳನ್ನು ಹಾಕಿ ಎಡಿಟ್ ಮಾಡುವುದು, ಮನಸ್ಸಿಗೆ ಘಾಸಿ ಉಂಟು ಮಾಡುವ, ಅಗತ್ಯವೇ ಇಲ್ಲದೆ ಇರುವ ಭಂಗಿಯಲ್ಲಿ ದೈವದ ಫೋಟೋ ತೆಗೆಯುವುದು, ಸಂದಿ ಪಾಡ್ದನ ಬೀರಗಳಲ್ಲಿ ಇಲ್ಲದ ಕಥೆಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೋ ಮಾಡುವುದು ಇವೇ ಮೊದಲಾದ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಸಾಮಾಜಿಕ ಜಾಲತಾಣ ಪೇಜ್, ಗ್ರೂಪ್, ಖಾತೆಗಳ ಮೇಲೆ ದೂರು ಸಲ್ಲಿಸಲಾಗಿದೆ.

ತುಳುನಾಡ ದೈವಾರಧನೆ ಸಸಂಸ್ಕೃತಿ ಮೂಲ ನಂಬಿಕೆ ಉಳಿಸಬೇಕೆಂಬ ನಿಟ್ಟಿನಲ್ಲಿ ಯುವ ತುಳುನಾಡ್ “ತುಳುನಾಡ ಸಂಸ್ಕೃತಿ ಓರಿಪಾಗ” ಅಭಿಯಾನವನ್ನು ಪ್ರಾರಂಭಿಸಿದೆ. ತುಳುನಾಡಿನಾದ್ಯಂತ ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಷೇಧ ಮತ್ತು ತುಳುಲಿಪಿ ಬೊರ್ಡ್ ಮತ್ತು ಮನವಿಗಳನ್ನು ಮಾಡುತ್ತಾ ಬರುತ್ತಿದೆ.

ಈ ಹಿಂದೆಯೂ ಅನೇಕ ಬಾರಿ ಈ ಬಗ್ಗೆ ತುಳುನಾಡಿನಾದ್ಯಂತ ದೈವ ನಂಬಿಕೆಗೆ ಘಾಸಿ ಮಾಡುವವರ ವಿರುದ್ಧ ಭಾರಿ ವಿರೋಧ ವ್ಯಕ್ತವಾಗಿತ್ತು.‌ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಂಬಿಕೆ ಒರಿಪಾಗ ಎನ್ನುವ ಹ್ಯಾಶ್‌ಟ್ಯಾಗ್‌ನಡಿ ಅಭಿಯಾನ ನಡೆದಿತ್ತು. ನೂರಾರು ಜನ ದೈವದ ಭಕ್ತಿಗೀತೆಯನ್ನು ಬರೆಯುವುದಿಲ್ಲ, ದೈವದ ಫೋಟೋವನ್ನು ಲೈಕ್ಸ್‌ಗಾಗಿ ಬಳಸಿಕೊಳ್ಳುವುದಿಲ್ಲ, ಎಡಿಟೆಡ್ ವೀಡಿಯೋ ಪೋಸ್ಟ್ ಮಾಡುವುದಿಲ್ಲ, ಎಡಿಟ್ ಮಾಡುವುದಿಲ್ಲ ಎಂಬ ಪ್ರತಿಜ್ಞೆ ಕೂಡಾ ತೆಗೆದುಕೊಂಡಿದ್ದು ಭಾರೀ ಸುದ್ದಿಯಾಗಿತ್ತು. ಹೀಗಾಗಿ ಎಡಿಟ್ ಮಾಡುವ, ಫೋಟೋ ತೆಗೆಯುವ, ಚಿತ್ರ ಬಿಡಿಸುವ ಮುನ್ನ ಯೋಚಿಸಿ. ಕಾನೂನಿನ ಕುಣಿಕೆಯಲ್ಲಿ ಬೀಳಬೇಡಿ.

ಯುವ ತುಳುನಾಡ್ ಕುಡ್ಲ ಸಂಘಟನೆ ಈಗಾಗಲೇ ಮಂಗಳೂರು ಕಮಿಷನರ್, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈ ಬಗ್ಗೆ ಈಗಾಗಲೇ ದೂರು ದಾಖಲಿಸಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 95 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 277 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 191 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 294 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ