ತುಳುನಾಡಿನ ನೆಲ ಜಲ ಭಾಷೆಯ ಹೋರಾಟದ ಮುಂಚೂಣಿಯಲ್ಲಿದ್ದ ಗ್ರಾ.ಪಂ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಯವರಿಗೆ ತುಳುನಾಡ್ ಒಕ್ಕೂಟದಿಂದ ಸನ್ಮಾನ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾದ ಪ್ರಸಾದ್ ಶೆಟ್ಟಿ ಎಣಿಂಜೆ ಇವರಿಗೆ ತುಳುನಾಡ್ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟದ ಸ್ಥಾಪಕಾಧ್ಯಕ್ಷ ಶೈಲೇಶ್ ಆರ್. ಜೆ. ಮಾತನಾಡಿ ತುಳುನಾಡ್ ಒಕ್ಕೂಟ ಕೇಂದ್ರ ಸಮಿತಿಯ ಕಾರ್ಯದರ್ಶಿಯಾಗಿದ್ದ ಪ್ರಸಾದ್ ಶೆಟ್ಟಿಯವರ ಕೊಡುಗೆ ಅಪಾರ ಸಂಘಟನಾತ್ಮಕವಾಗಿ ತನ್ನನ್ನು ತಾನು ತೊಡಗಿಸಿಕೊಂಡು ತುಳುನಾಡ್ ಒಕ್ಕೂಟ ಬೆಳೆಯಲು ಕಾರಣಕರ್ತರಾಗಿದ್ದರು ಅದಲ್ಲದೆ ತುಳುನಾಡಿನ ನೆಲ ಜಲ ಭಾಷೆಯ ಬಗ್ಗೆ ನಡೆದ ಹೋರಾಟದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದ ಇವರು ಇದೀಗ ಲಾಯಿಲ ಗ್ರಾಮ ಪಂಚಾಯತ್ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ ಮುಂದೆಯೂ ತುಳು ಪರವಾಗಿ ಚಿಂತನೆಗಳನ್ನು ಮಾಡುವ ಮೂಲಕ ತುಳುನಾಡಿನ ಅಭಿವೃದ್ಧಿಗೆ ಶ್ರಮಿಸುವಂತಾಗಲಿ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಸಾದ್ ಶೆಟ್ಟಿ ಎಣಿಂಜೆ ತುಳುನಾಡ್ ಒಕ್ಕೂಟ ನೀಡಿದ ಈ ಗೌರವಕ್ಕೆ ನಾನು ಚಿರಋಣಿ ಮುಂದೆಯೂ ತುಳುಪರ ಚಿಂತನೆಗಳನ್ನು ಮಾಡುತ್ತ ತುಳುನಾಡ್ ಒಕ್ಕೂಟದ ಕಾರ್ಯಕ್ರಮಗಳಲ್ಲಿ ಬೆಂಬಲಿಗನಾಗಿರುತ್ತೇನೆ ಎಂದರು.

ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲ್ಲೂಕು ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಕಾನೂನು ಸಲಹೆಗಾರರಾದ ವಕೀಲ ಪ್ರಶಾಂತ್ ಎಂ., ವಕೀಲ ನವೀನ್ ಬಿ.ಕೆ., ವಕೀಲ‌ ಸತೀಶ್ ಪಿ. ಎಸ್., ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ಲೋಬೋ, ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಾಜು ಬಿ.ಎಚ್. , ಕೇಂದ್ರೀಯ ಘಟಕದ ಜೊತೆ ಕಾರ್ಯದರ್ಶಿ ಜಿ. ವಿ. ಹರೀಶ್, ರಾಜೇಶ್ ಕುಲಾಲ್, ನವೀನ್ ಪೂಜಾರಿ ಅಡ್ಕದ ಬೈಲ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ