ಉಡುಪಿಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.

ಸೇನಾ ರ‍್ಯಾಲಿಯಲ್ಲಿ, 38500 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಅವರಿಗೆ ಶೌಚಗೃಹ, ಕುಡಿಯುವ ನೀರಿನ ಸೌಲಭ್ಯ ಒದಗಿಸಿ. ಸ್ವಚ್ಚತೆ, ಶ್ಯಾಮಿಯಾನ, ಬ್ಯಾರಿಕೇಡ್ ಅಳವಡಿಕೆ, ಲೈಟ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ನಿಯೋಜನೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಒಗದಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಲು ಸೂಕ್ತ ಸಿಬ್ಬಂದಿಯನ್ನು ನೇಮಿಸುವಂತೆ ಡಿಡಿಪಿಐ ಗೆ, ರ‍್ಯಾಲಿ ಸ್ಥಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಯ್ಕೆ ನಡೆಸಲು ಆಗಮಿಸುವ ಸೇನಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಹಾಗೂ ಸೂಕ್ತ ವಾಹನಗಳ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ನಗರ ಸಭೆ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಡಿಡಿಪಿಐ ಎನ್.ಹೆಚ್.ನಾಗೂರ, ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ದುಬಾಶ್ ಮತ್ತು ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 10 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ