ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ

ಉಜಿರೆ: ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಸಿರುವಾಣಿ ಸಮರ್ಪಣೆ ನಡೆಯಿತು.

ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಜನಾರ್ಧನ ಸ್ವಾಮಿಯ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನಾಂಕ 02/03/2026ನೇ ಸೋಮವಾರ ತಾಲೂಕಿನ ಹಲವು ಗ್ರಾಮಗಳಿಂದ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರುಗಳಿಂದ ಭವ್ಯ ಮೆರವಣಿಗೆ ಮೂಲಕ ಹೊರೆ ಕಾಣಿಕೆ ಸಮರ್ಪಣೆ ಮಾಡಲಾಯಿತು.

ಸುಮಾರು 200ಕ್ಕೂ ಅಧಿಕ ಅಕ್ಕಿ ಮುಡಿ ಗಳನ್ನು ಹೊತ್ತು ರೈತರು ಬೆಳೆದ ತರಕಾರಿ ಅಡಿಕೆ,ತೆಂಗು, ಬಾಳೆಗೊನೆ, ಹೀಗೆ ಉಪಯುಕ್ತ ವಸ್ತುಗಳನ್ನು ಒಳಗೊಂಡಿತ್ತು. ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯಾಗಿ ಹುಲಿ ಕುಣಿತ ಭಜನಾ ತಂಡದ ಜೊತೆಗೆ ಚೆಂಡೆ ವಾದನದ ಜೊತೆಗೆ ಉಜಿರೆಯ ರತ್ನವರ್ಮ ಕ್ರೀಡಾಂಗಣದಿಂದ ದೇವಸ್ಥಾನದ ವರೆಗೆ ಕಾಲ್ನಡಿಗೆಯ ಮೂಲಕ ತರಲಾಯಿತು.

ಬಳಿಕ ಕೃಷ್ಣಾನುಗೃಹ ಸಭಾಂಗಣದಲ್ಲಿ ಉಡುಪಿ ಹಂಗಾರಕಟ್ಟೆ ಬಾಳೆಕುದ್ರು ಮಠದ ಪರಮಪೂಜ್ಯ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್‌ಸಿಂಹ ನಾಯಕ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಡ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ಶೀಧರ ಜಿ. ಭಿಡೆಮನೆ ಮುಂಡಾಜೆ, ಬೆಂಗಳೂರು ಕ್ಷೇಮವನನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್‌, ಧರ್ಮಸ್ಥಳ ಎಸ್‌.ಕೆ.ಡಿ.ಆ‌ರ್.ಡಿ.ಪಿ. ಬಿಸಿ ಟ್ರಸ್ಟ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾ‌ರ್ ಎಸ್.ಎಸ್. ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ‘ಸುಶಾಸನ’ ದೇವಳದ ನೂತನ ಆಡಳಿತ ಕಾರ್ಯಾಲಯ ಮತ್ತು ‘ಸುವಾಸ’ ತಂತ್ರಿ ನಿವಾಸ ಹಾಗೂ ಮಾಧ್ಯಮ ಕೇಂದ್ರವನ್ನು ಶ್ರೀ ಬಾಳೆಕುದ್ರು ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಉದ್ಘಾಟನೆ ನೆರವೇರಿಸಿದರು. ‘ಸುರಭಿ’ ಬ್ರಹ್ಮ ಕಲಶೋತ್ಸವ ಕಾಯಾ೯ಲಯವನ್ನು ಶ್ರೀ ಸದಾಶೀವೇಶ್ವರ ದೇವಸ್ಥಾನ ಸುರ್ಯದ ಅನುವಂಶಿಕ ಆಡಳಿತ ಈ ಮೊಕ್ತಸರಾದ ಡಾ.ಸತೀಶ್ಚಂದ್ರ ಉದ್ಘಾಟಿಸಿದರು.

‘ಸಮೃದ್ಧಿ’ ಹಸಿರುವಾಣಿ ಉಗ್ರಾಣವನ್ನು ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ಧರ್ಮಸ್ಥಳದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್‌ ಕುಮಾ‌ರ್ ಉದ್ಘಾಟಿಸಿದರು. ‘ಸುಪ್ರಸಾದ’ ಭೋಜನ ಶಾಲೆಯನ್ನು ಉಜಿರೆ ರಬ್ಬ‌ರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ ಉದ್ಘಾಟಿಸಿದರು. ಸುರುಚಿ ಪಾಕಶಾಲೆಯನ್ನು ಬೆಂಗಳೂರು ಕ್ಷೀಮವನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರದ್ಧಾ ಅಮಿತ್ ಉದ್ಘಾಟಿಸಿದರು.

ದೇವಸ್ಥಾನದ ಆಡಳಿತ ಮೊಕ್ತಸರ ಶರತ್‌ಕೃಷ್ಣ ಪಡ್ಡೆಟ್ನಾಯ ಸ್ವಾಗತಿಸಿದರು. ರಾಜಗೋಪುರ ನಿರ್ಮಾಣ ಸಮಿತಿ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು. ಎಸ್.ಡಿ.ಎಂ. ಸನಿವಾಸ ಪ.ಪೂ.ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು.

oplus_32
Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 6 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ