“ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

ಉಜಿರೆಯಲ್ಲಿ ಕೊಳಚೆ ನೀರಿನ ದುರ್ವಾಸನೆ: ಸಾಂಕ್ರಾಮಿಕ ರೋಗದ ಭೀತಿ!!!

ಉಜಿರೆ: ಉಜಿರೆ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕೆಳಗಿನ ಪೆಟ್ರೋಲ್ ಬಂಕ್ ಸಮೀಪದ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗಿದ್ದು, ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ಕಳೆದ ಕೆಲವು ದಿನಗಳಿಂದ ಮಳೆಯ ಅಭಾವದಿಂದ ಚರಂಡಿಯಲ್ಲಿನ ನೀರು ಹರಿದು ಹೋಗದೆ ತ್ಯಾಜ್ಯ ನೀರು ನಿಂತುಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ಮಾದರಿಯ ಚರಂಡಿಯ ಕಾಮಗಾರಿ ಅಪೂರ್ಣವಾಗಿರುವುದರಿಂದ ನೀರು ಸರಾಗವಾಗಿ ಹರಿಯಲು ಅವಕಾಶವಿಲ್ಲದಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಮೀಪದಲ್ಲೇ ಶಾಲೆಯೂ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಚರಂಡಿಯಲ್ಲಿ ನೀರು ನಿಂತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಗುತ್ತಿಗೆದಾರರು ತಕ್ಷಣ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆರೋಗ್ಯ ಇಲಾಖೆಯೂ ಇಂತಹ ಲೋಪಗಳ ಬಗ್ಗೆ ಎಚ್ಚೆತ್ತುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಜನಪ್ರತಿನಿಧಿಗಳು ಕೂಡ ಸಮಸ್ಯೆಯತ್ತ ಗಮನಹರಿಸಿ ಶೀಘ್ರ ಪರಿಹಾರ ಒದಗಿಸಬೇಕಾಗಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ