ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಮಾತನಾಡಿ, ನಮ್ಮ ಸಾತ್ವಿಕ ಶಕ್ತಿಯನ್ನು ತೋರಿಸುವ ಸಲುವಾಗಿ ದಿವಂಗತ ಡಾಕ್ಟರ್ ಬಿ. ಯಶೋವರ್ಮ ಹಾಗು ದಿವಂಗತ ವಿಜಯ ರಾಘವ ಪಡುವಟ್ನಾಯರ ಮಾರ್ಗದರ್ಶನದಲ್ಲಿ ಕೇವಲ 500 ಜನರಿಂದ ಆರಂಭವಾದ ಈ ಪಾದಯಾತ್ರೆ ಇಂದು ಬೃಹತ್ ಹೆಮ್ಮರವಾಗಿ ಬೆಳೆದಿದೆ. ಹಿರಿಯರು ಮತ್ತು ಊರಿನವರ ಭಕ್ತಿ ಮತ್ತು ಸಹಕಾರದಿಂದ ಇದೊಂದು ಧಾರ್ಮಿಕ ಪರಂಪರೆಯಾಗಿ ಬೆಳೆಯುತ್ತಿದೆ. ಬಹು ಶಿಸ್ತಿನಿಂದ ನಡೆದುಕೊಂಡು ಬಂದಿರುವ ಈ ಪಾದಯಾತ್ರೆ ಇನ್ನು ಮುಂದೆಯೂ ಹೀಗೆ ಸಾಗುತ್ತದೆ ಎಂದರು.

ಮಾಜಿ ಎಂ.ಎಲ್.ಸಿ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಪ್ರತಿ ಸವಾಲುಗಳನ್ನು ಮೆಟ್ಟಿ ನಾವು ಹೆಜ್ಜೆ ಹಾಕಬೇಕು. ಆರಂಭದಿಂದಲೂ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ಹೊರಿಸುವ ಪ್ರಯತ್ನಗಳು ನಡೆಯುತ್ತಾ ಬಂದಿದೆ. ಧರ್ಮಾಧಿಕಾರಿಗಳಾದ ಪೂಜ್ಯ ಖಾವಂದರ ಬಿಳಿಯ ಶುಭ್ರ ವಸ್ತ್ರವನ್ನು ಯಾರೂ ಕಪ್ಪು ಮಾಡಲು ಸಾಧ್ಯವಿಲ್ಲ. ಶ್ರದ್ಧೆ ಮತ್ತು ಭಕ್ತಿಯಿಂದ ನಾವೆಲ್ಲ ಒಟ್ಟು ಸೇರಿ ಈ ಪಾದಯಾತ್ರೆಯನ್ನು ಯಶಸ್ವಿ ಮಾಡೋಣ ಎಂದರು.

ಸಭೆಯಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ದಿನಾಂಕ 15 ರಂದು 2:30ಕ್ಕೆ ಸರಿಯಾಗಿ ಎಲ್ಲರೂ ಶ್ರೀ ಕ್ಷೇತ್ರ ಜನಾರ್ದನ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಸೇರುವರು. ಬಳಿಕ 3 ಗಂಟೆಗೆ ಸರಿಯಾಗಿ 13ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡಿ, 3:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದೆಡೆಗಿನ ಪಾದಯಾತ್ರೆಯ ಮೆರವಣಿಗೆ ಆರಂಭವಾಗುತ್ತದೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ದಾರಿ ಯುದ್ಧಕ್ಕೂ ನೀರು ಮತ್ತು ಬೆಲ್ಲದ ವ್ಯವಸ್ಥೆ ಮಾಡಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿದ ಬಳಿಕ 5:30ಕ್ಕೆ ಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಲಿದೆ ಎಂದರು. ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ ಪೈ ಮಾತನಾಡಿದರು. ಸಭೆಯ ವೇದಿಕೆಯಲ್ಲಿ ಸುರ್ಯ ಸದಾಶೀವೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹಾಗು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್, ಬೆಳ್ತಂಗಡಿ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಉಜಿರೆ ಪಂಚಾಯಿತಿ ಅಧ್ಯಕ್ಷೆ ಉಷಾ ಕಾರಂತ್, ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಯೋಗೀಶ್ ಕುಮಾರ್ ನಡಕರ, ಮೋಹನ್ ಕುಮಾರ್, ರಾಜೇಶ್ ಪೈ, ಹಿರಿಯ ವಕೀಲ ಸುಬ್ರಹ್ಮಣ್ಯ ಅಗರ್ತ ಸೇರಿದಂತೆ ಊರಿನ ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಕರಪತ್ರವನ್ನು ಸರ್ವರ ಸಮ್ಮುಖದಲ್ಲಿ ಗಣ್ಯರಿಂದ ಬಿಡುಗಡೆ ಮಾಡಲಾಯಿತು.ಸಭೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ರಾಮಕುಮಾರ್ ನಿರೂಪಿಸಿ, ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ವಂದಿಸಿದರು.

Spread the love
  • Related Posts

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ದಕ್ಷಿಣ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 2 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 11 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು