
ನವದೆಹಲಿ : ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆಯಾಗಿದ್ದು, ಸೆ.7 ರಿಂದ ದೇಶಾದ್ಯಂತ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ದೇಶಾದ್ಯಂತ ಕೊರೊನಾ ಲಾಕ್ ಡೌನ್ ಹಿನ್ನೆಲೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಸೆ.7 ರಿಂದ ದೇಶಾದ್ಯಂತ ಮೆಟ್ರೋ ಸಾರಿಗೆ ವ್ಯವಸ್ಥೆಯನ್ನು ಪುನರ್ ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ನಿರ್ಧರಿಸಿದೆ ಎನ್ನಲಾಗಿದೆ. ಇನ್ನೂ, ಸೆಪ್ಟೆಂಬರ್ 30 ರವರೆಗೆ ಶಾಲಾ ಕಾಲೇಜು ತೆರೆಯುವಂತಿಲ್ಲ, ಆನ್ ಲೈನ್ ಮೂಲಕವೇ ಶಿಕ್ಷಣ ನೀಡಬೇಕು ಎಂದು ಸೂಚನೆ ನೀಡಿದೆ. ಹಂತ ಹಂತವಾಗಿ ಬೆಂಗಳೂರು ಸೇರಿದಂತೆ ಹಲವು ಕಡೆ ಮೆಟ್ರೋ ಸಂಚಾರ ಆರಂಭವಾಗಲಿದೆ.
ಹೆಚ್ಚಿನ ಜನಸಂದಣಿ ದಟ್ಟವಾಗುವುದನ್ನು ತಪ್ಪಿಸಲು ಸೇವೆಗಳನ್ನು ಸುವ್ಯವಸ್ಥಿತ ರೀತಿಯಲ್ಲಿ ಪುನಾರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ.
