ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ‌ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್‍ https://kea.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಮಾರ್ಚ್ 04 ರಿಂದ ಆರಂಭವಾಗಲಿದ್ದು, ಏಪ್ರೀಲ್ 03 ರವರೆಗೆ ಅವಕಾಶವಿದೆ. ಆನ್‍ಲೈನ್ ಮೂಲಕ ಶುಲ್ಕ ಪಾವತಿ ಮಾಡಲು ಏಪ್ರೀಲ್ 06 ಕೊನೆಯ ದಿನಾಂಕವಾಗಿರುತ್ತದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅಭ್ಯರ್ಥಿಗಳಿಗೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ. ನೇಮಕಾತಿಯು ಸರ್ಕಾರ, ಸಕ್ಷಮ ಪ್ರಾಧಿಕಾರ, ನೇಮಕಾತಿ ಪ್ರಾಧಿಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಮುಖ ದಿನಾಂಕ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 04-03-2024ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-04-2024 ಆಗಿರುತ್ತದೆ. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 06-04-2024. ವಯೋಮಿತಿ: ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.ವೇತನ ಶ್ರೇಣಿ; 21400-42000

ಅರ್ಜಿ ಶುಲ್ಕ:ಶುಲ್ಕ ಸಾಮಾನ್ಯ, ಹಿಂದುಳಿದ ವರ್ಗದವರಿಗೆ 750 ರೂ. ಎಸ್ಸಿ ಎಸ್ಟಿ, ವಿಕಲಚೇತನರಿಗೆ 500 ರೂ.ಸ್ಪರ್ಧಾತ್ಮಕ ಪರೀಕ್ಷೆಯನ್ನು ಪರೀಕ್ಷಾ ಪ್ರಾಧಿಕಾರ ನಡೆಸಲಿದ್ದು. ಪರೀಕ್ಷೆಯಲ್ಲಿ ಆಯ್ಕೆಯಾಗಬೇಕು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಡೆದ ಅಂಕ ಆಧರಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ

ಅರ್ಜಿ ಸಲ್ಲಿಸುವುದು ಹೇಗೆ..?

ಮೊದಲು kea.kar.nic ವೆಬ್ ಸೈಟ್ ಕ್ಲಿಕ್ ಮಾಡಿ, ಗ್ರಾಮ ಅಡಳಿತಾಧಿಕಾರಿ ಹುದ್ದೆಗೆ ನೇಮಕಾತಿ ಎಂಬುದರ ಮೇಲೆ ಕ್ಲಿಕ್ ಮಾಡಿಜಿಲ್ಲಾವಾರು, ಹುದ್ದೆಗಳ ಲಭ್ಯತೆ, ಮೀಸಲಾತಿವಾರು ಸೀಟುಗಳ ಹಂಚಿಕೆಯನ್ನು ಮಾಡಲಾಗಿದ್ದು, ಇದರಲ್ಲಿ ಅರ್ಜಿ ಸಲ್ಲಿಸುವ ಮಾರ್ಗದ ವಿವರ ಇದೆ. ಅಲ್ಲಿಗೆ ತೆರಳಿ ನಿಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ, ಯಾವ ಜಿಲ್ಲೆ ಎನ್ನುವ ಅಂಶವನ್ನು ನಮೂದಿಸಬೇಕು. ನಂತರ ಶುಲ್ಕವನ್ನು ಭರ್ತಿ ಮಾಡಿದ ಮಾಹಿತಿಯನ್ನೂ ಅದರಲ್ಲಿ ಉಲ್ಲೇಖಿಸಬೇಕು. ಅರ್ಜಿ ಯನ್ನು ಸ್ವೀಕಾರ ಮಾಡಿ ವೆರಿಫೈ ಮಾಡಲಾಗುತ್ತದೆ, ನಂತರ ಪರೀಕ್ಷೆಗೆ ಪ್ರವೇಶ ಪತ್ರ ಬರುತ್ತದೆ. ನಂತರ ನಿಮ್ಮ ಪರೀಕ್ಷೆ ಪ್ರವೇಶ ಪತ್ರವೂ ಬರಲಿದೆ. ಹೆಚ್ಚಿನ ಮಾಹಿತಿಗೆ 080-23460460 ಸಂಪರ್ಕಿಸಿ.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 42 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 34 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 34 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 31 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 40 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 35 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ