ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

ಮಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಕರಾವಳಿಯ ಜಾನಪದ ಕ್ರೀಡೆ ಕಂಬಳದ ಹಿನ್ನೆಲೆಯುಳ್ಳ ‘ವೀರ ಕಂಬಳ’ ಚಿತ್ರವು ಫೆಬ್ರವರಿ 27, 2026 ರಂದು ತೆರೆಗೆ ಬರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರದೊಂದಿಗೆ ಹಾಗೂ, ಪ್ರಕಾಶ್ ರೈ, ರವಿಶಂಕರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾವು ಸುಮಾರು 700 ವರ್ಷಗಳ ಇತಿಹಾಸ ಮತ್ತು ಎರಡು ಮನೆತನಗಳ ಘರ್ಷಣೆಯನ್ನು ಆಧಾರಿಸಿದೆ.

ಕಂಬಳದ ಕಥಾಹಂದರ ಹೊಂದಿರುವ ಈ ವೀರ ಕಂಬಳ ಕನ್ನಡ, ತುಳು ಭಾಷೆಯ ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಚಿತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷತೆಯಾಗಿದೆ.

ತುಳು ರಂಗಭೂಮಿಯ ಪ್ರಸಿದ್ದ ನಿರ್ದೇಶಕ ವಿಜಯ್ ಕೊಡಿಯಾಲ್ ಬೈಲ್ ಚಿತ್ರಕಥೆ ಮತ್ತು ಸಂಭಾಷಣೆಯ ಮೂಲಕ ಈ ಚಿತ್ರಕ್ಕೆ ಜೊತೆಯಾಗಿದ್ದಾರೆ. ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ನಾಯಕನಾಗಿ ಸವಾಲಿನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪ್ರತಿಯೊಂದು ಸೂಕ್ಷ್ಮ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತುಳುನಾಡಿನ ಪ್ರಾಜ್ಞರ ಮಾರ್ಗದರ್ಶನದಲ್ಲಿ ಯಾವುದೇ ತೊಡಕಿಲ್ಲದಂತೆ ವೀರ ಕಂಬಳವನ್ನು ಅಣಿಗೊಳಿಸಿರುವುದಾಗಿ ರಾಜೇಂದ್ರ ಸಿಂಗ್ ಬಾಬು ಅಭಿಪ್ರಾಯ ಹಂಚಿಕೊಂಡಿದ್ದರು.

ವಿಶೇಷವೆಂದರೆ, ಕಂಬಳದಲ್ಲಿ ಕೋಣಗಳನ್ನು ಓಡಿಸೋದರಲ್ಲಿ ದಾಖಲೆ ಬರೆದಿರುವ ಶ್ರೀನಿವಾಸ್‌ ಗೌಡ ಇಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿದ್ದಾರೆ. ಸ್ವರಾಜ್ ಶೆಟ್ಟಿ ಅವರಿಗೆ ಜೊತೆಯಾಗಿದ್ದಾರೆ. ದುಬೈನಲ್ಲಿಯೂ ಚಿತ್ರೀಕರಣ ನಡೆಸಲಾಗಿದೆ.

ಈ ಚಿತ್ರವನ್ನು ಡಾ. ವಿನಿತಾ ವಿಜಯ್ ಕುಮಾರ್‌ರೆಡ್ಡಿ ಹಾಗೂ ಅರುಣ್ ರೈ ತೊಡಾರ್‌ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್‌ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ದ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ .ಎಸ್‌.ಬಾಬು ಸಂಕಲನ, ಚಂದ್ರಶೇಖರ್‌ಸುವರ್ಣ ಮುಲ್ಕಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Spread the love
  • Related Posts

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಬೆಂಗಳೂರು: ವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ಕಾನೂನು ಬಾಹಿರವಾಗಿ ಬಂಧನಗಳನ್ನು ನಡೆಸುವ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯವು (High court of Karnataka) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಹೈಕೋರ್ಟ್‌ನ ಈ…

    Spread the love

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ…

    Spread the love

    You Missed

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 9 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 8 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 8 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 9 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 12 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 21 views