TRENDING
Next
Prev

ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹೋಗುವಾಗ ಬೆಳಗಿನ ಜಾವ ಅಪಘಾತವಾಗಿದೆ.

READ ALSO

ವಾಮನ್ ಕುಮಾರ್ ವೇಣೂರು ಅವರು ತೆಂಕುತಿಟ್ಟಿನ ಅನುಭವಿ ಕಲಾವಿದರಾಗಿದ್ದರು. ಸುಮಾರು ಮೂವತ್ತು ವರ್ಷಗಳಿಂದ ಕಲಾಸೇವೆಯನ್ನು ಮಾಡುತ್ತಿದ್ದರು‌. ಸ್ತ್ರೀ ವೇಷ ಮತ್ತು ಪುಂಡು ವೇಷಧಾರಿಯಾಗಿ ಕಲಾಭಿಮಾನಿಗಳಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಗುಮೊಗದ ಸರಳ, ಸಜ್ಜನ ಕಲಾವಿದರಿವರು. ಪ್ರಸ್ತುತ ಕಿಶನ್ ಹೆಗ್ಡೆ ಸಂಚಾಲಕತ್ವದ ಹಿರಿಯಡಕ ಮೇಳದಲ್ಲಿ ಕಲಾವಿದರಾಗಿ ಮತ್ತು ಪ್ರಬಂಧಕರಾಗಿ ಸೇವೆ ಸಲ್ಲಿಸುತ್ತಿದ್ದರು.