“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ ಇಂದು ಪ್ರದಾನ

ಬೆಳ್ತಂಗಡಿ: ವಿದ್ಯಾದಾನ, ಅನ್ನದಾನ, ಅಕ್ಷರ ದಾಸೋಹ, ಶಿಕ್ಷಣ ಕ್ಷೇತ್ರ ಜೊತೆಗೆ ಸಮಾಜದ ಕಟ್ಟಕಡೆಯ ಕುಟುಂಬಗಳು ನೆಮ್ಮದಿಯಿಂದ ಇರಬೇಕು, ಆರ್ಥಿಕವಾಗಿ ಬಲಿಷ್ಠರಾಗಬೇಕೆಂದು 1982 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ್ದು ಇದರಿಂದಾಗಿ ಲಕ್ಷಾಂತರ ಮಂದಿ ಬೆಳಕನ್ನು ಕಂಡಿದ್ದಾರೆ. ಜೊತೆಗೆ ಕುಡಿಯುವ ನೀರು, ಕೃಷಿ ಗೆ ನೀರು, ಪ್ರಾಣಿ ಸಂಕುಲಗಳಿಗೆ ಬರಡು ಭೂಮಿಯಲ್ಲೂ ನೀರು ಸಿಗಬೇಕು ಎನ್ನುವ ಉದ್ದೇಶದಿಂದ “ನಮ್ಮೂರು ನಮ್ಮ ಕೆರೆ” ಕೆರೆಗಳಿಗೆ ಕಾಯಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 1000 ಕೆರೆಗಳನ್ನು ಜೀರ್ಣೋದ್ಧಾರಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯದ ನಂ.1 ದಿನಪತ್ರಿಕೆ “ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತಿದೆ. ಆಗಸ್ಟ್‌ 20 ರಂದು ಮಲೇಷ್ಯಾದಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

2016 ರಲ್ಲಿ ಊರಿಗೆ ನೀರುಣಿಸುತ್ತಿದ್ದ ಕೆರೆಗಳು ಕಣ್ಮರೆಯಾಗುತ್ತಿದ್ದನ್ನು ಕಂಡ ಡಾ.ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರು “ನಮ್ಮೂರು ನಮ್ಮ ಕೆರೆ” ಕೆರೆಗಳನ್ನು ಪುನಶ್ಚೇತನಗೊಳಿಸುವ ಕಾರ್ಯಕ್ರಮ ಜಾರಿಗೆ ತಂದರು.ರೈತರು ಮಹಿಳೆಯರನ್ನು ಒಳಗೊಂಡ ಕೆರೆ ಸಮಿತಿಗಳನ್ನು ರಚಿಸಿ ಜನರ ಸಹಭಾಗಿತ್ವವನ್ನು ಪಡೆದು ಜೊತೆಗೆ ಸಂಸ್ಥೆಯ 160 ನೋಡೆಲ್‌ ಅಧಿಕಾರಿಗಳು 07 ಜನ ನುರಿತ ಇಂಜಿನಿಯರ್‌ಗಳ ತಂಡವನ್ನು ರಚಿಸಿ ಈ ಕೆರೆಗಳ ಪುನಶ್ಚೇತನ ಮಾಡಲಾಗುತ್ತಿದೆ. ಕುಡಿಯುವ ನೀರು ಅಲ್ಲದೆ ಪ್ರಾಣಿ ಸಂಕುಲಗಳಿಗೂ, ಜಾನುವಾರುಗಳಿಗೂ ನೀರು ಯೆತೇಚ್ಛವಾಗಿ ಸಿಗಬೇಕೆಂದು ಶಿವಮೊಗ್ಗದ ತಾವರೆಕೆರೆ ಹುಲಿ ಮತ್ತು ಸಿಂಹಧಾಮದಲ್ಲಿ 10 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು ಯೆತೇಚ್ಛನೀರು ಬರುತ್ತಿದ್ದು ಸುಮಾರು 400 ವನ್ಯ ಜೀವಿಗಳಿಗೆ ನೀರು ಆಶ್ರಯವಾಗಿದೆ.

ಈ ಕಾರ್ಯಕ್ರಮಕ್ಕೆ ಶಾಸಕರುಗಳು, ಸಂಸದರುಗಳು, ಸ್ವಾಮೀಜಿಗಳು, ಸರಕಾರ ಮಟ್ಟದ ಅಧಿಕಾರಿಗಳು ಜೊತೆಯಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಿದ್ದು ಇದುವರೆಗೆ 914 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು ಸುಮಾರು 332.30 ಲಕ್ಷ ಕ್ಯು.ಮೀ. ಹೂಳನ್ನು ತೆಗೆಯಲಾಗಿದೆ. ಸುಮಾರು 877.84 ಕೋಟಿ ಗ್ಯಾಲನ್‌ ನೀರಿನ ಸಂಗ್ರಹಣ ಸಾಮರ್ಥ್ಯ ಹೆಚ್ಚಳಗೊಂಡಿದೆ ಇದರಿಂದ 2,65,962 ಎಕ್ರೆ ಕೃಷಿ ಭೂಮಿಗೆ ಪ್ರಯೋಜನವಾಗಿದ್ದು 4,18,174 ಕುಟುಂಬಗಳು ಪ್ರಯೋಜನ ಪಡೆದಿದ್ದು 402.62 ಎಕ್ರೆ ಪ್ರದೇಶ ಒತ್ತುವರಿ ತೆರವುಗೊಳಿಸಲಾಗಿದೆ. ಇದಕ್ಕೆ ಯೋಜನೆಯಿಂದ 72.37 ಕೋಟಿ ಅನುದಾನವನ್ನು ಬಳಸಲಾಗಿದೆ.

ಇವರ ಅಧ್ಯಕ್ಷತೆಯಲ್ಲಿ ನಡೆಯುವ ರಾಜ್ಯಾದ್ಯಂತ ಇರುವ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಒಟ್ಟು 6,21,401 ಸ್ವ ಸಹಾಯ ಸಂಘಗಳಿದ್ದು 52,42,421 ಸದಸ್ಯರಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕ್ ಗಳ ಬಿ.ಸಿ ಯಾಗಿ ( business correspondence) ಸ್ವ ಸಹಾಯ ಸಂಘಗಳನ್ನು ರಚಿಸಿ ಬ್ಯಾಂಕ್ ಗಳಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರಕಿಸಿಕೊಡುತ್ತದೆ. ಇಂದು ರಾಜ್ಯಾದ್ಯಂತ ಲಕ್ಷಾಂತರ ಮಹಿಳೆಯರು, ರೈತರು, ಯುವಕರು ಆರ್ಥಿಕ ಚಟುವಟಿಕೆ, ಕ್ರುಷಿ, ಸ್ವ ಉದ್ಯೋಗ ಮುಂತಾದಿವುದಳನ್ನು ಕೈಗೊಂಡು ಸ್ವಾವಲಂಬಿ ಬದುಕನ್ನು ನಡೆಸುತ್ತಿದ್ದಾರೆ.

ಸದಸ್ಯರ ಆರೋಗ್ಯ ರಕ್ಷಣೆಗೆ ಸಂಪೂರ್ಣ ಸುರಕ್ಷಾ, ಆರೋಗ್ಯ ರಕ್ಷಾ ವಿಮೆ ಇದ್ದು, ಸಾಲದ ಬದ್ರತೆಗೆ ಮೈಕ್ರೋ ಬಜತ್‌, ಬಿಮಾ ಜ್ಯೋತಿ ಸೂಕ್ಷ್ಮ ವಿಮೆ ಇದ್ದು, ಪ್ರಗತಿ ರಕ್ಷಾ ಕವಚ, ಪ್ರಗತಿ ವಿಮೆಯ ಸೌಲಭ್ಯವನ್ನು ಸದಸ್ಯರು ಪಡೆಯುತ್ತಾರೆ. ಯೋಜನೆಯಲ್ಲಿ ಒಟ್ಟು 42,121 ಕಾರ್ಯಕರ್ತರಿದ್ದಾರೆ. ಕುಡಿತದ ಛಟಕ್ಕೆ ಕುಟುಂಬಗಳು ಬಲಿಯಾಗುತ್ತಿದ್ದನ್ನು ಮನಗಂಡ ಹೆಗ್ಗಡೆಯವರು 1992 ರಲ್ಲಿ ಜನಜಾಗೃತಿ ವೇದಿಕೆಯನ್ನು ಪ್ರಾರಂಬಿಸಿ ಆ ಮೂಲಕ ಮಧ್ಯವರ್ಜನ ಶಿಬಿರ ನಡೆಸಿ ಇದುವರೆಗೆ 1969 ಶಿಬಿರಗಳನ್ನು ಮಾಡಿದ್ದು ಇದುವರೆಗೆ 1,32,327 ಮಂದು ದುಶ್ಚಟ ಮುಕ್ತರಾಗಿ ಸುಖಿ ಜೀವನ ನಡೆಸುತ್ತಿದ್ದಾರೆ. ಜೊತೆಗೆ ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ನೀಡಬೇಕು ಎಂದು ಸಿರಿ ಸಂಸ್ಥೆಯನ್ನು ಪ್ರಾರಂಭಿಸಿದ್ದು ಇದರಲ್ಲಿ ಸಾವಿರಾರು ಮಹಿಳೆಯರು ಉದ್ಯೋಗ ಪಡೆದು ಜೀವನ ನಡಸುತ್ತಿದ್ದಾರೆ.

ನಿರುದ್ಯೋಗ ಸಮಸ್ಯೆ ನಿವಾರಿಸಲು ಡಾ.ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 1982 ರಲ್ಲಿ‌ ಉಜಿರೆಯಲ್ಲಿ ರುಡ್ ಸೆಟ್‌ ಪ್ರಾರಂಭವಾಗಿದ್ದು ಬಳಿಕ ರಾಜ್ಯಾದ್ಯಂತ 27 ರುಡ್‌ ಸೆಟ್‌ ಗಳು ಸ್ಥಾಪನೆಯಾಗಿದ್ದು ಇದರಲ್ಲಿ ಇದುವರೆಗೆ 19,911 ತರಬೇತಿ ಕಾರ್ಯಕ್ರಮಗಳನ್ನು ಮಾಡಿದ್ದು ಇದರಲ್ಲಿ 6,0173 ಮಂದಿ ತರಬೇತಿ ಪಡೆದಿದ್ದು ಇದರಲ್ಲಿ 4,41,540 ಸ್ವ ಉದ್ಯೋಗ ಪ್ರಾರಂಭಿಸಿ ಸ್ವಂತ ಜೀವನ ನಡೆಸುತ್ತಿದ್ದಾರೆ. ರುಡ್‌ ಸೆಟ್‌ ನ ಯಶಸ್ವಿ ಕಂಡು ಕೇಂದ್ರ ಸರಕಾರ ದೇಶದಾದ್ಯಂತ ಈ ಕಾರ್ಯಕ್ರಮ ನಡೆಸಲು ಆರ್.ಸೆಟಿ ಪ್ರಾರಂಭಿಸಿದ್ದು ಇದುವರೆಗೆ ದೇಶದಾದ್ಯಂತ 614 ಆರ್‌ ಸೆಟಿಗಳಿದ್ದು ಈ ಮೂಲಕ 2,04,699 ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರಲ್ಲಿ 57,13,122 ಮಂದಿ ತರಬೇತಿ ಪಡೆದಿದ್ದು ಇದರಲ್ಲಿ 41,26,952 ಮಂದಿ ಸ್ವ ಉದ್ಯೋಗ ಮಾಡುತ್ತಿದ್ದಾರೆ.

ಜೊತೆಗೆ ಧರ್ಮೋತ್ಥಾನ ಟ್ರಸ್ಟ್‌ ಮೂಲಕ ಪುರಾತನ ಶಿಲಾಮಯ ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸುತ್ತಿದ್ದು ಇದುವರೆಗೆ 291 ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸಿದ್ದು 13 ದೇವಸ್ಥಾನಗಳು ಜೀರ್ಣೋದ್ಧಾರ ಪ್ರಗತಿಯಲ್ಲಿದೆ. ಇದಕ್ಕಾಗಿ 40 ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ. ಶ್ರೀ ಧ.ಮಂ.ಭಜನಾ ತರಬೇತಿ ಕೇಂದ್ರದ ಮೂಲಕ ಸಾವಿರಾರು ಮಂದಿಗೆ ಭಜನಾ ತರಬೇತಿ ನೀಡುತ್ತಿದ್ದಾರೆ. ಶಾಂತಿವನ ಟ್ರಸ್ಟ್‌ ಮೂಲಕ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸಲು ಗುಣಮಟ್ಟದ ಲಕ್ಷಾಂತರ ಪುಸ್ತಕಗಳನ್ನು ಶಾಲೆಗಳಿಗೆ ವಿತರಿಸುತ್ತಿದ್ದಾರೆ. ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ, ಬೆಂಚು ಡೆಸ್ಕುಗಳ ವಿತರಣೆ, ರಾಜ್ಯ ಸಭಾ ನಿಧಿಯಿಂದ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೆರವು, ವಾತ್ಸಲ್ಯ ಯೋಜನೆಯ ಮೂಲಕ ಹಿರಿಯರಿಗೆ ವೃದ್ಧಾಪ್ಯ ವೇತನ, ಮನೆ ನಿರ್ಮಾಣ ಕಾರ್ಯಕ್ರಮವನ್ನು ಮಾಡುತ್ತಿದ್ದು, ಕ್ಷೇತ್ರದಲ್ಲಿ ನಿತ್ಯ ಬರುವ ಭಕ್ತರನ್ನು ಮಾತನಾಡಿಸಿ ಧೈರ್ಯ ತುಂಬುವ ಕಾರ್ಯ ಮತ್ತು ನೆರವು ನೀಡುವ ಕಾರ್ಯ ಮಾಡುತ್ತಿದ್ದು, ನಿತ್ಯ ಅನ್ನ ದಾಸೋಹ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ.

ಈ ಎಲ್ಲಾ ಸೇವೆಗಾಗಿ ಡಾ.ಹೆಗ್ಗಡೆಯವರಿಗೆ ರಾಷ್ಟ್ರಪತಿ ಡಾ.ಶಂಕರ್‌ ದಯಾಳ್‌ ಶರ್ಮ ರಿಂದ ರಾಜಶ್ರೀ ಪ್ರಶಸ್ತಿ, ಮಂಗಳೂರು ವಿ.ವಿ. ಯಿಂದ ಗೌರವ ಡಾಕ್ಟರೇಟ್‌, ಇಂದಿರಾಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ, ಮಾಜಿ ಪ್ರಧಾನ ಅಟಲ್‌ ಬಿಹಾರಿ ವಾಜಪೇಯಿಯವರಿಂದ ಫಿಕ್ಕಿ ಪ್ರಶಸ್ತಿ, ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ, 2003 ರಲ್ಲಿ ಕರ್ನಾಟಕ ಸರಕಾರದಿಂದ ಕರ್ನಾಟಕ ಪರವರ್ತನೆಯ ರೂವಾರಿ ಪ್ರಶಸ್ತಿ, 2024 ರಲ್ಲಿ ಕಂಚಿ ಕಾಮಕೋಟಿ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾ ಸ್ವಾಮೀಜಿಯವರಿಂದ ಮಲೆನಾಡು ರತ್ನ ಬಿರುದು ಸಹಿತ ಅನೇಕ ಗೌರವಗಳಿಗೆ ಪಾತ್ರರಾಗಿದ್ದಾರೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 189 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 36 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 303 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 51 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 106 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 51 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ