ತ್ಯಾಗ, ಬಲಿದಾನ, ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

ಉಜಿರೆ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರವರು ಮಾತನಾಡುತ್ತಾ ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ ಹಿರಿಯ ಕಾರ್ಯಕರ್ತರ ಶ್ರಮದ ಫಲದಿಂದ ಸಂಘಟನೆ ಶಕ್ತಿಯುತವಾಗಿ ಬೆಳೆದಿದೆ. ದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು. ಧರ್ಮ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂದು ಹೇಳಿದರು.

ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಭಾಗದ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಹಿಂದೂ ಸಮಾಜದ ಮೇಲೆ ನಡೆಯುವ ರಾಜಕೀಯ ಮತ್ತು ಸಾಮಾಜಿಕ ದಾಳಿಯನ್ನು ಖಂಡಿಸಬೇಕು. ಜಾತಿ ವಿಚಾರದಲ್ಲಿ ಹಿಂದೂ ಸಮಾಜ ವಿಂಗಡಣೆಯಾಗಬಾರದು ಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಉತ್ಸವಸಮಿತಿ ಅಧ್ಯಕ್ಷ ಡಾ. ಎಂ. ಎಂ. ದಯಾಕರ್ ಮಾತನಾಡಿ, ನಮ್ಮೊಳಗಿನ ಶಕ್ತಿ ಇನ್ನಷ್ಟು ಬಲಗೊಂಡು ನ್ಯಾಯಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ 60 ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ನವೀನ್ ನೆರಿಯಾ, ಡಾ. ಭಾರತಿ, ಜಿ.ಕೆ., ಎಕ್ಸೆಲ್ ಕಾಲೇಜಿನ ಆಡಳಿತ ನಿರ್ದೇಶಕ ಸುಮಂತ್ ಕುಮಾರ್ ಜೈನ್, ಮೊದಲಾದವರು ಉಪಸ್ಥಿತರಿದ್ದರು. ಸಂಪತ್ ಸುವರ್ಣ ಸ್ವಾಗತಿಸಿ ಮೋಹನ್ ಬೆಳ್ತಂಗಡಿ ವಂದಿಸಿದರು.

Spread the love
  • Related Posts

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    2024ರಲ್ಲಿ ವಿವಿಧೆಡೆ ಸಂಭ್ರಮದಿಂದ ಪೂಜಿಸಲ್ಪಟ್ಟ ಗಣಪ 1.ಸೌತಡ್ಕ ಮಹಾಗಣಪತಿ ವಿಶೇಷ ಅಲಂಕಾರದಲ್ಲಿ 2.ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ಪೂಜಿಸಲ್ಪಟ್ಟ ಗಣಪ 3.ಬೆಳ್ತಂಗಡಿಯ ಲಾಯಿಲಾ ದಲ್ಲಿ ಪೂಜಿಸಲ್ಪಟ್ಟ ಬಲಮುರಿ ಗಣಪ 4. ಉಜಿರೆಯ ಸಿದ್ದವನ ಗುರುಕುಲದಲ್ಲಿ ಪೂಜಿಸಲ್ಪಟ್ಟ ಗಣಪ 5.ಪಡಂಗಡಿಯಲ್ಲಿ ಪೂಜಿಸಲ್ಪಟ್ಟ ಗಣಪ…

    Spread the love

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.…

    Spread the love

    You Missed

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 35 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 94 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 214 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 38 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 27 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 23 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ