
ಮಂಗಳೂರು: ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ ವಿಟ್ಲದ ಕೇಪು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂೂಕಿನ ಕುವೆಟ್ಟು ಗ್ರಾಮದ ನಿವಾಸಿ ವಿಶ್ವನಾಥ ಆಚಾರ್ಯ ಅವರ ಪುತ್ರ ಪ್ರಸಾದ್ ಆಚಾರ್ಯ(28) ಮೃತಪಟ್ಟ ದುರ್ದೈವಿ.
ಪ್ರಸಾದ್ ಆಚಾರ್ಯ ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು. ನಿನ್ನೆ ತಡರಾತ್ರಿ ಟೆರೇಸ್ ಮೇಲೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ವಿಟ್ಲ ಪೋಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.