ಮುಂಬೈ: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಸಂಶೋಧಕ ಹಾಗೂ ಚಿಂತಕ ಡಾ. ವ್ಯಾಸರಾವ್ ನಿಂಜೂರು (86) ಅವರು ನವೆಂಬರ್ 3, 2026ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ತೆಂಕನಿಡಿಯೂರು ಮೂಲದವರಾಗಿದ್ದ ಡಾ. ವ್ಯಾಸರಾವ್ ನಿಂಜೂರು ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ಸಾಹಿತ್ಯ, ಸಂಶೋಧನೆ ಹಾಗೂ ಚಿಂತನಾ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ್ದ ಅವರು, 2006ರಲ್ಲಿ ಇನ್ನದಲ್ಲಿ ನಡೆದ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ (BARC) ವಿಜ್ಞಾನಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು, ವೃತ್ತಿಯಲ್ಲಿ ವಿಜ್ಞಾನಿಯಾಗಿದ್ದರೂ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ಅಪಾರ ಒಲವು ಹೊಂದಿದ್ದರು.
ಕಥೆ, ಲೇಖನ ಹಾಗೂ ಸಾಹಿತ್ಯ ಸಂಶೋಧನೆಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದ ಅವರು, ತಮ್ಮ ಸಾಹಿತ್ಯಿಕ ಸಾಧನೆ ಹಾಗೂ ಚಿಂತನೆಗಳಿಂದ ಓದುಗರ ಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು.ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಕನ್ನಡ ಸಾಹಿತ್ಯ ಲೋಕಕ್ಕೆ ಅವರ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದ್ದು, ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ




