ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೋಮವಾರ (ಜು.06) ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಭಾರೀ ಮಳೆಗೆ ಮಂಗಳವಾರ (ಜು.07) ಭೀಕರ ಭೂಕುಸಿತ ಸಂಭವಿಸಿದೆ.

ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಹತ್ತಿರ ಈ ಘಟನೆ ನಡೆದಿದ್ದು, ಪ್ರವಾಸಿ ಹೋಂಸ್ಟೇಗಳು ಹಾಗೂ ಆನಕ್ಕಂಪೋಯಿಲ್-ಮೇಪ್ಪಾಡಿ ಸುರಂಗ ಮಾರ್ಗ ನಿರ್ಮಾಣದ ಕಾರ್ಮಿಕರು ತಂಗಿದ್ದ ಜಾಗದ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಮಾಹಿತಿಯ ಪ್ರಕಾರ ಈಗಾಗಲೇ ಇಬ್ಬರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಸುರಂಗ ರಸ್ತೆ ಕಾಮಗಾರಿ ನಡೆಯುತ್ತಿದ್ದುದರಿಂದ ಹಲವಾರು ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದ್ದು, ಮಣ್ಣಿನ ಅಡಿಯಲ್ಲಿ ಹಲವರು ಸಿಲುಕಿರುವ ಭೀತಿ ಎದುರಾಗಿದೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯ ನಿವಾಸಿಗಳೇ ತಕ್ಷಣವೇ ಕಾರ್ಯಪ್ರವೃತ್ತರಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಸದ್ಯ ಗಾಯಗೊಂಡಿರುವ ಐವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇದುವರೆಗೆ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ. ಆದರೆ ಕಾರ್ಮಿಕರನ್ನು ಕರೆದೊಯ್ಯಲು ನಿಲ್ಲಿಸಿದ್ದ ಹಲವು ವಾಹನಗಳು ಸಂಪೂರ್ಣ ಜಖಂಗೊಂಡಿವೆ.

ಕಳೆದ 24 ಗಂಟೆಗಳಲ್ಲಿ ಈ ಭಾಗದಲ್ಲಿ ಬರೋಬ್ಬರಿ 265 ಮಿಲಿಮೀಟರ್‌ನಷ್ಟು ದಾಖಲೆ ಪ್ರಮಾಣದ ಮಳೆಯಾಗಿದ್ದು, ಇದೇ ಭೂಕುಸಿತಕ್ಕೆ ಮುಖ್ಯ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಕಲ್ಪೆಟ್ಟಾದಿಂದ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ದಾವಿಸಿದ್ದು, ಮೀನಾಂಗಡಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದೆ.

ಕೇರಳ ಕೃಷಿ ಸಚಿವ ಟಿ. ಸಿದ್ದಿಕ್ ಹಾಗೂ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಮಣ್ಣಿನಡಿ ಬೇರೆ ಯಾರಾದರೂ ಸಿಲುಕಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತೀವ್ರ ಹುಡುಕಾಟ ಮುಂದುವರಿದಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕೊಟ್ಟಾಯಂ (ಕೇರಳ): ಕೇರಳದಾದ್ಯಂತ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಕೋಟ್ಯಂತರ ಆನೆ ಪ್ರಿಯರ ಹೃದಯ ಗೆದ್ದಿದ್ದ ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಭಾನುವಾರ ಸಿಡಿಲು ಬಡಿದು ದುರಂತವಾಗಿ ಸಾವನ್ನಪ್ಪಿದೆ. ಎರಟ್ಟುಪೆಟ್ಟಾ ಬಳಿಯ ಮೇಲಂಪಾರದಲ್ಲಿ ಈ ಆಘಾತಕಾರಿ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    You Missed

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 4 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 5 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 7 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 11 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 14 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 12 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”