ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಮದ್ಯಮಾರಾಟಕ್ಕೆ ಯತ್ನ! ಅಬಕಾರಿ ಇಲಾಖೆಯ ದಾಳಿ ಸಂದರ್ಭ ಬೈಕ್ – ಮದ್ಯ ಬಿಟ್ಟು ಆರೋಪಿ ಪರಾರಿ ಬರೋಬ್ಬರಿ 15.300 ಲೀಟರ್ ಮದ್ಯ ವಶಕ್ಕೆ!

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವಾಗ ಬೆಳ್ತಂಗಡಿಯ ಅಬಕಾರಿ ಇಲಾಖೆಯವರು ದಾಳಿ ಮಾಡಿ 15.300 ಲೀಟರ್ ಮದ್ಯ ವಶ ಪಡೆದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ.

READ ALSO

ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ 15.300 ಲೀಟರ್ ಮದ್ಯ ಹಾಗೂ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ರೂ. 46 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕಿ ಸೌಮ್ಯಲತಾ ಎನ್, ಮುಖ್ಯ ಪೇದೆ ಸಯ್ಯದ್ ಶಬೀರ್ ಹಾಗೂ ಅಬಕಾರಿ ಪೇದೆಗಳಾದ ಭೋಜ.ಕೆ, ಶಿವಶಂಕ್ರಪ್ಪ, ರವಿಚಂದ್ರ ಬೂದಿಹಾಳ ಮತ್ತು ವಾಹನ ಚಾಲಕ ನವೀನ್ ಕುಮಾರ್ ಪಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.