‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ…

    Spread the love

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 3 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 5 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 6 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ