ಅತ್ತೆ ಮಾವನ ಪಾಲನೆಯು ಅಳಿಯನ ಜವಾಬ್ದಾರಿ ಅಳಿಯನಿಂದಲೂ ಪಡೆಯಬಹುದು ಜೀವನಾಂಶ

ನವದೆಹಲಿ: ಹೆಂಡತಿಯ ಅಪ್ಪ ಅಮ್ಮನಿಗೆ ಇರೋದು ಇಬ್ಬರೇ ಹೆಣ್ಣು ಮಕ್ಕಳು, ಆಸ್ತಿಯೆಲ್ಲ ನಮಗೇ ಸಿಗುತ್ತೆ. ಅವರನ್ನ ನೋಡಿಕೊಳ್ಳಬೇಕೆನ್ನುವ ಗೋಳೂ ಇಲ್ಲ ಎಂದು ನೀವು ಯೋಚಿಸುತ್ತಿದ್ದರೆ ಆ ಯೋಚನೆಯನ್ನು ಈಗಲೇ ಬಿಟ್ಟು ಬಿಡಿ. ಏಕೆಂದರೆ ಇನ್ನು ಮುಂದೆ ಅತ್ತೆ ಮಾವನನ್ನು ನೋಡಿಕೊಳ್ಳುವ ಜವಾಬ್ದಾರಿ ಅಳಿಯಂದರಿಗೂ ಸೇರಿದ್ದು ಎನ್ನುವ ಕಾನೂನು ಜಾರಿಯಾಗಲಿದೆ.

ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ 2019ಕ್ಕೆ ತಿದ್ದುಪಡಿ ತರಲಾಗುತ್ತಿದೆ. ಈ ತಿದ್ದುಪಡಿಗೆ ಸಂಸತ್ತಿನ ಸ್ಥಾಯಿ ಸಮಿತಿಯು ಅಂಗೀಕಾರ ನೀಡಿದೆ. ಅದರ ಪ್ರಕಾರ ಕೇವಲ ಮಕ್ಕಳು ಮಾತ್ರವಲ್ಲ, ಅಳಿಯ, ಸೊಸೆ, ಮೊಮ್ಮಕ್ಕಳು, ದತ್ತುಪುತ್ರರಿಗೂ ವೃದ್ಧರ ಜವಾಬ್ದಾರಿ ಇರಲಿದೆ. ಪ್ರತಿಯೊಬ್ಬರೂ ವೃದ್ಧರನ್ನು ಜವಾಬ್ದಾರಿಯುತವಾಗಿ ನೋಡಿಕೊಳ್ಳಬೇಕು.

ಅಷ್ಟೇ ಅಲ್ಲ, ಹೆಂಡತಿಯ ಅಪ್ಪ ಅಮ್ಮನಿಗೆ ಜೀವನ ಭತ್ಯೆಯನ್ನೂ ಕೊಡಬೇಕಾಗಲಿದೆ.

ಜೀವನಭತ್ಯೆಯನ್ನು ವೃದ್ಧರ ಜೀವನ ಶೈಲಿಯನ್ನು ನೋಡಿ ನಿರ್ಧರಿಸಲಾಗುವುದು ಎಂದು ತಿದ್ದುಪಡಿಯಲ್ಲಿ ನಮೂದಿಸಲಾಗಿದೆ. ದೇಶದಲ್ಲಿ ಪ್ರಸ್ತುತ12 ಕೋಟಿಯಷ್ಟು ಹಿರಿಯ ನಾಗರಿಕರಿದ್ದಾರೆ. ಈ ಸಂಖ್ಯೆ ಇನ್ನು ಐದು ವರ್ಷಗಳಲ್ಲಿ 17 ಕೋಟಿಗೆ ಏರಿಕೆಯಾಗಲಿದೆ. ಹಿರಿಯ ನಾಗರಿಕರ ಕ್ಷೇಮಕ್ಕೆಂದು ಈ ರೀತಿಯ ತಿದ್ದುಪಡಿ ಅವಶ್ಯಕ ಎನ್ನಲಾಗಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ