ನವದೆಹಲಿ: ಭಾರತದಲ್ಲಿ ಉದ್ಯೋಗಿಗಳಿಗೆ ಅವರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಕೊರೊನಾ ವೈರಸ್ ಸೋಂಕು ತಡೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಭಾನುವಾರದಿಂದ ಲಸಿಕೆ ನೀಡಬಹುದು. ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
‘ಯಾವುದೇ ಸಂಸ್ಥೆಯುಲ್ಲಿ ಕೆಲಸ ಮಾಡುವ 100ಕ್ಕಿಂತ ಹೆಚ್ಚು ಅರ್ಹ ಉದ್ಯೋಗಿಗಳು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬಂದರೆ ಅಂಥ ಸ್ಥಳಗಳಲ್ಲಿ ಲಸಿಕೆ ಹಾಕಲು ಅಗತ್ಯ ಸೌಕರ್ಯ ಕಲ್ಪಿಸಿಕೊಂಡು, ಲಸಿಕೆ ಹಾಕಬಹುದು’ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮುಂದಿನ ಭಾನುವಾರ (ಏಪ್ರಿಲ್ 11) ಈ ಯೋಜನೆಯನ್ನು ಆರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.