ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣಕ್ರಾಂತಿ ಮಾಡಿದ ಎಕ್ಸೆಲ್ ಶಿಕ್ಷಣ ಸಂಸ್ಥೆ ಇದೀಗ ತನ್ನ ವಿದ್ಯಾಸಂಸ್ಥೆಯನ್ನು ವಿಸ್ತರಿಸುತ್ತಾ ನೂತನವಾಗಿ ನಿರ್ಮಿಸಿದ ಕಟ್ಟಡದಲ್ಲಿ ಶೈಕ್ಷಣಿಕ ಕಾರ್ಯಚಟುವಟಿಗಳ ಮತ್ತು ಪ್ರಯೋಗಾಲಯಗಳ ಉದ್ಘಾಟನಾ ಸಮಾರಂಭವು ಇದೇ ಬರುವ 22/02/2021 ಸೋಮವಾರದಂದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು DCC ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, sdm ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೋ.ಎಸ್.ಪ್ರಭಾಕರ್, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್, ಉದ್ಯಮಿಗಳಾದ ಶಶಿಧರ ಶೆಟ್ಟಿ ನವಶಕ್ತಿ, ಬರೋಡಾ, ಬಿ.ಗಣೇಶ್ ಭಟ್ ಸಮತಾ ಬೆಳ್ತಂಗಡಿ, ಶಮಂತ್ ಕುಮಾರ್ ಜೈನ್ ಬೆಳ್ತಂಗಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.