ಯಾಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು : ತೌಕ್ತೆ ಚಂಡಮಾರುತದ ಬಳಿಕ ಇದೀಗ ಯಾಸ್ ಚಂಡಮಾರುತ ತನ್ನ ಆರ್ಭಟ ತೋರಿಸಲು ಸಜ್ಜಾಗಿದೆ, ಬಂಗಾಳಕೊಲ್ಲಿಯಲ್ಲಿ ವಾಯಭಾರದಿಂದ ಸೃಷ್ಟಿಯಾಗಿರುವ ಯಾಸ್ ಚಂಡಮಾರುತ ಇಂದು ಒರಿಸ್ಸಾ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಅಪ್ಪಳಿಸಲಿದೆ.

ರಾಜ್ಯದಲ್ಲಿ ಕೂಡ ಯಾಸ್ ಚಂಡಮಾರುತ ತನ್ನ ಪ್ರದರ್ಶನ ತೋರಿಸಲಿದ್ದು, ಕರಾವಳಿ ಜಿಲ್ಲೆಯಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.ಹಾಗೂ ರಾಜ್ಯದ ಒಳನಾಡಿನಲ್ಲಿ ಕೂಡ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

READ ALSO