ಯಾಸ್ ಚಂಡಮಾರುತ ತೀವ್ರ ರೂಪ ಪಡೆಯುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಮಾನ ಇಲಾಖೆಯ ಸೂಚನೆ!

ಬೆಂಗಳೂರು: ಬಂಗಾಳಕೊಲ್ಲಿಯ ಪೂರ್ವಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರ ಚಂಡಮಾರುತದ ಸ್ವರೂಪ ಪಡೆದು ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ತೀರವನ್ನು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗಲೇಬೇಕು ಎಂದು ಹೇಳಲಾಗದು. ಈಗಿನ ಸೂಚನೆಯಂತೆ ಮೇ 23ರಂದು ಬೆಳಿಗ್ಗೆ ಬಂಗಾಳಕೊಲ್ಲಿಯ ಪೂರ್ವಮಧ್ಯ ಭಾಗದಲ್ಲಿ ಕೇಂದ್ರೀಕೃತಗೊಳ್ಳುವ ವಾಯುಭಾರ ಕುಸಿತ ಬಳಿಕ ಉತ್ತರ-ವಾಯವ್ಯದತ್ತ ಚಲಿಸಿ, ಮೇ 24ರ ವೇಳೆಗೆ ತೀವ್ರ ಬಿರುಗಾಳಿಯ ರೂಪ ಪಡೆಯುತ್ತದೆ. ಬಳಿಕ ಮುಂದಿನ 24 ಗಂಟೆಯ ಅವಧಿಯಲ್ಲಿ ತೀವ್ರ ಚಂಡಮಾರುತವಾಗಿ ಮಾರ್ಪಡಲಿದೆ. ಬಳಿಕ ಮುಂದುವರಿದು ಮೇ 26ರ ಸಂಜೆ ವೇಳೆಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯನ್ನು ಹಾದುಹೋಗಲಿದೆ ಎಂದು ಇಲಾಖೆ ಹೇಳಿದೆ.
ಯಾಸ್ ಚಂಡಮಾರುತ: ಒಡಿಶಾ, ಬಂಗಾಳದಲ್ಲಿ ಕಟ್ಟೆಚ್ಚರ

ಪಶ್ಚಿಮ ಕರಾವಳಿ ತೀರದ ಪ್ರದೇಶಗಳು ತೌಕ್ತೆ ಚಂಡಮಾರುತದ ಅಬ್ಬರದಿಂದ ಚೇತರಿಸಿಕೊಳ್ಳುವ ಮೊದಲೇ ದೇಶದ ಪೂರ್ವ ಕರಾವಳಿಗೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ಯಾಸ್ ಎಂಬ ಹೆಸರಿವ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯನ್ನು ಮೇ 26ರಂದು ಹಾದುಹೋಗುವ ಸಾಧ್ಯತೆ ಇರುವುದರಿಂದ ಎರಡೂ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಚಂಡ ಮಾರುತದ ಹಿನ್ನೆಲೆಯಲ್ಲಿ ಎದುರಾಗಲಿರುವ ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಆರೋಗ್ಯ ವ್ಯವಸ್ಥೆ ಹಾಗೂ ಔಷಧಗಳನ್ನು ಅಗತ್ಯದ ಪ್ರಮಾಣದಲ್ಲಿ ದಾಸ್ತಾನು ಇಡುವಂತೆ ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಂಡಮಾನ್-ನಿಕೊಬಾರ್ ದ್ವೀಪಗಳಿಗೆ ಕೇಂದ್ರ ಸರಕಾರ ಸೂಚಿಸಿದೆ.

ಒಡಿಶಾದ 30 ಜಿಲ್ಲೆಗಳ ಪೈಕಿ 14ರಲ್ಲಿ ಕಟ್ಟೆಚ್ಚರದ ಸ್ಥಿತಿ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರುವಂತೆ ಒಡಿಶಾ ಸರಕಾರ ನೌಕಾಪಡೆ ಹಾಗೂ ತಟರಕ್ಷಕ ಪಡೆಯನ್ನು ವಿನಂತಿಸಿದೆ.

ಮುಂದಿನ ವಾರ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ 22 ವಿಶೇಷ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ರೈಲ್ವೇ ಹೇಳಿದೆ.

ಅಂಡಮಾನ್-ನಿಕೊಬಾರ್ ದ್ವೀಪಗಳಲ್ಲಿ ಹಾಗೂ ಪೂರ್ವತೀರದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ದಳದ ತಂಡಗಳನ್ನು ನಿಯೋಜಿಸಲಾಗಿದೆ. ತೌಕ್ತೆ ಚಂಡಮಾರುತದ ಪ್ರಭಾವಕ್ಕೆ ಒಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ವಿಪತ್ತು ನಿರ್ವಹಣಾ ದಳದ ತುಕಡಿಯನ್ನು ವಾಪಾಸು ಕರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 42 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 20 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 38 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 62 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ