ವಿಶೇಷ ಭದ್ರತೆ ವಾಪಾಸ್ ಪಡೆದ ರಾಜ್ಯಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಯತ್ನಾಲ್! ‘ನನಗೆ ಏನೇ ಆದರೂ ಸರ್ಕಾರವೇ ಹೊಣೆ’

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಯತ್ನಾಳ್‌, ”ನನಗೆ ಏನಾದರೂ ತೊಂದರೆಗಳಾಗಲೀ ಅಥವಾ ಅನಾಹುತಗಳೇನಾದರೂ ಆದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್‌ ಯಡಿಯೂರಪ್ಪರ ಸರ್ಕಾರ ಹೊಣೆ” ಎಂದು ಹೇಳಿದ್ದಾರೆ.

ಈ ಸಂಬಂಧ ಸಿಎಂ ಯಡಿಯೂರಪ್ಪ, ಗೃಹ ಸಚಿವ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ”ನಾನು ಪ್ರಖರ ಹಿಂದುಪರವಾದ ಮತ್ತು ಜನಪರ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಹಿಂದೆ ನನ್ನ ಮೇಲೆ ಅನೇಕ ಬಾರಿ ಕೆಲವು ಹಿಂದು ವಿರೋಧಿ ಸಂಘಟನೆಗಳು ಮತ್ತು ಮತಾಂಧ ಶಕ್ತಿಗಳು ದಾಳಿ ಮಾಡುವ ದುರುದ್ದೇಶದ ಮುನ್ಸೂಚನೆಯನ್ನು ಅರಿತ ಸರ್ಕಾರದ ಪೊಲೀಸ್‌ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ನನಗೆ ಸೂಕ್ತ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ನಾನು ಮುಖ್ಯಮಂತ್ರಿಯವರ ವಿರುದ್ದ ಹೇಳಿಕೆ ನೀಡಿದ್ದೇನೆ ಎಂಬ ಕಾರಣಕ್ಕೆ ಇಂದು ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡಿ ಪೊಲೀಸ್‌ ಭದ್ರತೆಯನ್ನು ಹಿಂಪಡೆದಿದ್ದಾರೆ” ಎಂದು ದೂರಿದ್ದಾರೆ.

”ನೀವು ನಿಮ್ಮ ಹಳೇ ಚಾಳಿಯನ್ನು ಮುಂದುವರೆಸಿ ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದೀರಿ ಎಂದು ಬಿಎಸ್‌ವೈನ್ನು ಉದ್ದೇಶಿಸಿ ಹೇಳಿರುವ ಅವರು, ಈ ಮೂಲಕ ನನ್ನ ಜನಪರ, ಹಿಂದೂಪರ, ಅನ್ಯಾಯದ ವಿರುದ್ದದ ಹೋರಾಟವನ್ನು ಹತ್ತಿಕ್ಕಲಾಗದು” ಎಂದು ಹೇಳಿದ್ದಾರೆ.

”ಹಾಗೆಯೇ ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಯಾದರೆ ಅದಕ್ಕೆ ಸರ್ಕಾರ ಹೊಣೆಯಾಗುತ್ತದೆ. ನಿಮ್ಮ ಕೀಳುಮಟ್ಟದ ಕಾರ್ಯವೈಖರಿ ಹಾಗೂ ಸೇಡಿನ ರಾಜಕೀಯಕ್ಕೆ ನನ್ನ ಧಿಕ್ಕಾರವಿದೆ” ಎಂದು ಕೂಡಾ ಹೇಳಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ