ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿಭಾಗದಿಂದ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಿಸಿದೆ.

ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು.

ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು. ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 85 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 30 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 294 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 50 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 106 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 49 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ