ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಬುಧವಾರ ವಿನಯ್ ಕುಲಕರ್ಣಿ, ಒಬ್ಬ ಪೊಲೀಸ್‌ ಅಧಿಕಾರಿ ಸೇರಿ 17 ಮಂದಿ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದ್ದರು. ಅಪರಾಧಿಗಳಿಗೆ ಜೀವಿತಾವಧಿ ಶಿಕ್ಷೆ ಜತೆಗೆ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು. ಮತ್ತೂಂದೆಡೆ ಅಪರಾಧಿಗಳ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ-ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ಕೋರ್ಟ್ ಮಹತ್ವದ ತೀರ್ಪು ನೀಡಿ ಯೋಗೇಶ್ ಗೌಡ ಅವರ ಕುಟುಂಬಕ್ಕೆ 16 ಲಕ್ಷ ರೂ ಪರಿಹಾರವನ್ನು ನೀಡಲು ಆದೇಶಿಸಿದೆ. 19 ನೇ ಆರೋಪಿ ಚನ್ನಕೇಶವ ಬಿ.ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣದ ಮೊದಲ ಆರೋಪಿ ಬಸವರಾಜ ಮುತ್ತಗಿ ಮತ್ತು 17ನೇ ಆರೋಪಿ ಶಿವಾನಂದ್ ಅವರನ್ನು ಮಾಫಿ ಸಾಕ್ಷಿಯನ್ನಾಗಿಸಲಾಗಿತ್ತು. ಜತೆಗೆ 20ನೇ ಆರೋಪಿ ವಾಸುದೇವ್ ರಾಮ್ ನೀಲೆಕಣಿ ಮತ್ತು 21ನೇ ಆರೋಪಿ ಸೋಮಶೇಖ‌ರ್ ಬಸಪ್ಪ ನ್ಯಾಮಗೌಡ ಅವರನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಖುಲಾಸೆ ಮಾಡಲಾಗಿದೆ.

ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿರುವುದರಿಂದ ಕಾನೂನು ಪ್ರಕಾರ ಸ್ವಯಂಚಾಲಿತವಾಗಿ ಅವರ ಶಾಸಕ ಸ್ಥಾನವೂ ಅನರ್ಹಗೊಳ್ಳುತ್ತದೆ.

ಈ ಮೊದಲು ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈ ಹಿಂದೆ ಎಪ್ರಿಲ್ 9ರಂದು ತೀರ್ಪು ನೀಡುವುದಾಗಿ ಹೇಳಿತ್ತು. ಆದರೆ, ಅಂದು ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು ತಾಂತ್ರಿಕ ಕಾರಣಗಳಿರುವ ಕಾರಣ ಏ.15ಕ್ಕೆ ಮುಂದೂಡಿತ್ತು. ಇದೀಗ ತೀರ್ಪು ನೀಡಿರುವ ಕೋರ್ಟ್ 17 ಮಂದಿ ಆರೋಪಿಗಳು ಅಪರಾಧಿ ಎಂದು ಘೋಷಣೆ ಮಾಡಿ ಸುಳ್ಳು ಸಾಕ್ಷಿ ಮತ್ತು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿ ಸೆಷನ್ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶಿಸಿದೆ.

ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಫೆ.27ರಂದು ಷರತ್ತುಬದ್ಧ ಜಾಮೀನು ಪಡೆದುಕೊಂಡು ಬಿಡುಗಡೆಯಾಗಿದ್ದ ವಿನಯ್ ಕುಲಕರ್ಣಿ 47 ದಿನಗಳ ಬಳಿಕ ಮತ್ತೆ ಬುಧವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಗೆ ಜೀವಾವಧಿ ಶಿಕ್ಷೆಯಾಗಿರುವುದರಿಂದ ಕಾನೂನು ಪ್ರಕಾರ ಸ್ವಯಂಚಾಲಿತವಾಗಿ ಅವರ ಶಾಸಕ ಸ್ಥಾನವೂ ಅನರ್ಹಗೊಳ್ಳುತ್ತದೆ.

Spread the love
  • Related Posts

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ಬೆಳ್ತಂಗಡಿ: ಪಡ್ಲಾಡಿ–ನಿನ್ನಿಕಲ್ಲು ಬಳಿಯ ನೇತಾಜಿ ಬಡಾವಣೆಯ ನಿವೇಶನ ಹಂಚಿಕೆ, ಖಾಲಿ ನಿವೇಶನಗಳಿಗೆ ಬ್ಯಾಂಕ್ ಸಾಲ ನೀಡಿರುವುದು, ನಿವೇಶನಗಳ ಅನಧಿಕೃತ ಮಾರಾಟ ಹಾಗೂ ಮನೆ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪ, ಸರ್ಕಾರಿ ಜಮೀನು ಅತಿಕ್ರಮಣ, ಪುತ್ರಬೈಲು ಗ್ರಂಥಾಲಯ ಮತ್ತು ಎನ್‌ಆರ್‌ಎಲ್‌ಎಂ ಕಟ್ಟಡಗಳ ಕಳಪೆ…

    Spread the love

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ…

    Spread the love

    You Missed

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 4 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 9 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 7 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 8 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 11 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ