ಯೋಗಿ ಆದಿತ್ಯನಾಥ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಿಥುನ್ ರೈ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೂರು ಸಲ್ಲಿಕೆ!

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜಿಲ್ಲಾ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್ ರೈ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಜೀ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರನ್ನು ಮೆಚ್ಚಿಸಲು, ದ. ಕ ಜಿಲ್ಲೆಯಲ್ಲಿ ಶಾಂತಿ ಕದಡಲು ಪ್ರೇರೇಪಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಿಗೆ ದೂರು ನೀಡಲಾಯಿತು.


ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷ ಯಶವಂತ ಗೌಡ, ಯುವಮೋರ್ಚಾ ಮಂಡಲ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯದರ್ಶಿ ಗಳಾದ ಸುಧಾಕರ್ ಧರ್ಮಸ್ಥಳ, ಯತೀಶ್ ಶೆಟ್ಟಿ, ಮಂಡಲ ಕೋಶಾಧಿಕಾರಿ ಪ್ರದೀಪ್ಉಜಿರೆ , ಕಾರ್ಯದರ್ಶಿ ಪ್ರೀತಮ್, ಮತ್ತು ಸದಸ್ಯರಾದ ದಿವಿನ್ ಚಾರ್ಮಾಡಿ, ಪ್ರಕಾಶ್, ಗಿರೀಶ್, ಸುಧಾಕರ್, ವಸಂತ ನಾವೂರು, ಅಶೋಕ್ ಸಪಲ್ಯ, ಪ್ರಶಾಂತ್ ಅಂತರ ಮೊದಲ ಯುವಮೋರ್ಚಾ ದ ಪದಾಧಿಕಾರಿಗಳು ಉಪಸ್ಥಿತರಿದ್ದರು.

READ ALSO