ಯುವಕನಿಗೆ ಚೂರಿ ಇರಿತ|ಗಂಭೀರಗಾಯ ಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬೈಕಿನಲ್ಲಿ ಹಿಂಬಾಳಿಸಿಕೊಂಡು ಬಂದ ದುಷ್ಕರ್ಮಿಗಳು ಯುವಕನೋರ್ವನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿ.ಸಿ ರೋಡಿನಲ್ಲಿ ನಡೆದಿದೆ.

ಬ್ರಹ್ಮರಕೋಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಎಂಬಾತ ಚೂರಿ ಇರಿತಕ್ಕೊಳಗಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

READ ALSO

ದುಷ್ಕರ್ಮಿಗಳು ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಯುವಕನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ಮನೋಜ್ ಅವರು ವಿದೇಶದಲ್ಲಿ ಸಿವಿಲ್ ಇಂಜಿನಿಯರಿಂಗ್ ಉದ್ಯೋಗ ದಲ್ಲಿ ದ್ದು ಎರಡು ವಾರಗಳ ಹಿಂದೆಯಷ್ಟೆ ಊರಿಗೆ ಬಂದಿದ್ದರು.

ಘಟನಾ ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ಚೆಲುವರಾಜ್ ಬೇಟಿ ನೀಡಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಗೆ ತಿಳಿಸಿದ್ದು, ಶೀಘ್ರ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.