ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ.

ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

* ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

+ ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

+ ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

+ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು,

ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024 ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆದು, ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್ ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ ವೆಬ್‌ಸೈಟನ್ನು ಸಂಪರ್ಕಿಸುವುದು: https://yuvanidhischeme.in/

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 283 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 315 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 111 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ