ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು: ಸೋನಿಯಾ ಯಶೋವರ್ಮ

ಬೆಳ್ತಂಗಡಿ : ಕೃಷಿ ನಮ್ಮ ಸಂಸ್ಕೃತಿ, ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ ಯಶೋವರ್ಮ ಹೇಳಿದರು.

ಅವರು ಭಾನುವಾರ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಶ್ರೀ ಧರ್ಮಸ್ಥಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರ, ಇದರ ನೇತೃತ್ವದಲ್ಲಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಉಜರೆ ಎಸ್.ಡಿ.ಎಂ. ಕಾಲೇಜಿನ ಸ್ಪೋಟ್ಸ್ ಕ್ಲಬ್, ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘ (ರಿ.) ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವ್ಯವಸ್ಥಾಪನಾ ಸಮಿತಿ, ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಮಾರು 500 ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ‘ಯುವ ಸಿರಿ – ರೈತ ಭಾರತದ ಐಸಿರಿ’ ನೇಜಿ ನಾಟಿ ಕಾರ್ಯಕ್ರಮದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಗದ್ದೆಗೆ ಹಾಲೆರೆದು ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.

‘ಯುವ ಜನತೆಯಲ್ಲಿ ಅಪಾರ ಶಕ್ತಿಯಿದೆ. ಅವರಿಗೆ ಸರಿಯಾದ ಮಾರ್ಗದರ್ಶನ ಸಿಕ್ಕಾಗ ಸಮೃದ್ಧವಾದ ಸಂಸ್ಕಾರಭರಿತ ಸಮಾಜ ನಿರ್ಮಾಣವಾಗುತ್ತದೆ. ಬಿತ್ತನೆಯ ಭತ್ತವನ್ನು ಮೊಳಕೆಗಾಗಿ ನೀರಿನಲ್ಲಿ ನೆನೆಸುವ ಸಂದರ್ಭ ಅದರ ಜೊಲ್ಲು ಬೇರ್ಪಡಿಸುವಂತೆ ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು’ ಎಂದರು.

ಶಾಸಕ ಹರೀಶ್ ಪೂಂಜ ನೇಜಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ‘ಶಿಸ್ತು ಮತ್ತು ಬದ್ಧತೆಗೆ ಇನ್ನೊಂದು ರೂಪವೇ ಬದುಕು ಕಟ್ಟೋಣ ತಂಡವಾಗಿದೆ. ಈ ತಂಡದಿಂದ ರಾಜ್ಯಕ್ಕೆ ಮಾದರಿಯಾದ ಕೆಲಸವಾಗುತ್ತಿದೆ. ಯುವ ಪೀಳಿಗೆ ಹಾಗೂ ಹಿರಿಯರನ್ನು ಒಟ್ಟು ಸೇರಿಸಿಕೊಂಡು ತುಳುನಾಡಿನ ಸತ್ವವನ್ನು ಸಾರುವ ಕೆಲಸವಾಗುತ್ತಿದೆ’ ಎಂದರು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಸ್ತಾವಿಸಿಕವಾಗಿ ಮಾತನಾಡಿ, ಈ ಕಾರ್ಯಕ್ರಮದ ಹಿಂದೆ ಒಂದು ತಿಂಗಳ ಶ್ರಮ ಇದೆ. ನೇಜಿ ನೆಡುವ ಕೆಲಸ ಮಾತ್ರವಲ್ಲ ಅದನ್ನು ಮುಂದಕ್ಕೆ ಚೆನ್ನಾಗಿ ಬೆಳೆಸಿ ಕಟಾವು ಮಾಡಿ ಭತ್ತ ಮತ್ತು ಬೈ ಹುಲ್ಲನ್ನು ಬೇರ್ಪಡಿಸುವವರೆಗಿನ ಕೆಲಸವೂ ನಮ್ಮಿಂದ ನಡೆಯುತ್ತದೆ. ಇದು ಎಲ್ಲರಿಗೂ ಪ್ರೇರಣೆಯಾಗಬೇಕು. ಎಲ್ಲರ ಸಹಕಾರದಿಂದ ಮಾತ್ರ ಇದು ಸಾಧ್ಯವಾಗಿದೆ. ಈ ಕೆಲಸದಿಂದ ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ನಮ್ಮಲ್ಲೂ ಇಂತಹ ಕಾರ್ಯ ಮಾಡಬೇಕು ಎಂಬ ಕರೆಗಳ ಸಾಲು ಬರುತ್ತಿದೆ’ ಎಂದರು.

ವೇದಿಕೆಯಲ್ಲಿ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡ್ಡೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾದ ಮೋಹನ್ ಕುಮಾರ್, ರಾಜೇಶ್ ಪೈ, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ, ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿಭಾಗ ಮುಖ್ಯಸ್ಥ ರವೀಶ್ ಪಡುಮಲೆ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಕೆ.ಧನಂಜಯ ರಾವ್, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ, ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಕಾರ್ಯದರ್ಶಿ ದುರ್ಗಾ ಪ್ರಸಾದ್‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ,, ಧರ್ಮಸ್ಥಳ ಕೃಷಿ ವಿಭಾಗದ ಬಾಲಕೃಷ್ಣ ಪೂಜಾರಿ, ಎಸ್.ಡಿ.ಎಂ.ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಮಹೇಶ್ ಶೆಟ್ಟಿ, ದೀಪಾ ಆರ್ ರಾವ್, ಎಸ್.ಡಿ.ಎಂ. ಸ್ಪೋರ್ಟ್ ಕ್ಲಬ್ ನ ಮುಖ್ಯಸ್ಥ ರಮೇಶ್ ಮುಂತಾದವರಿದ್ದರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 198 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 36 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 303 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 51 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 106 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 51 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ