Mysore: ನಾಡಹಬ್ಬ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿರುವ ಕಂಬಳವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಹಾಗೂ ವೀರ ಗಂಗಾಧರ ಅಜ್ಜಯ್ಯ ಅವರ ಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಪುಟ್ಟರಂಗಶೆಟ್ಟಿ, ಶ್ರೀ ಎನ್.ಚಲುವರಾಯಸ್ವಾಮಿ, ಶಾಸಕರಾದ ಶ್ರೀ ಜಿ.ಟಿ. ದೇವೇಗೌಡ, ಶ್ರೀ ತನ್ವೀರ್ ಸೇಠ್, ಶ್ರೀ ಕೆ. ಹರೀಶ್ ಗೌಡ, ಶ್ರೀ ಅಶೋಕ್ ರೈ, ಮಾಜಿ ಶಾಸಕರಾದ ಶ್ರೀ ನರೇಂದ್ರ ಬಾಬು, ರಾಜ್ಯ ಕಂಬಳ ಸಮಿತಿ ಅಧ್ಯಕ್ಷರಾದ ಶ್ರೀ ದೇವಿ ಪ್ರಸಾದ್ ಶೆಟ್ಟಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ನರೇಂದ್ರ, ಬೋವಿ ನಿಗಮದ ಅಧ್ಯಕ್ಷರಾದ ಶ್ರೀ ರಾಮಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕರಾವಳಿಯ ಮಣ್ಣಿನ ಸೊಗಡು, ಜನಪದ ಸಂಸ್ಕೃತಿಯ ಶ್ರೀಮಂತಿಕೆ ಹಾಗೂ ತಲೆಮಾರುಗಳಿಂದ ಬೆಳೆದುಬಂದ ಸಂಪ್ರದಾಯಗಳ ಸೊಬಗು ಈ ಕ್ರೀಡೆಯಲ್ಲಿ ಅನನ್ಯವಾಗಿ ಮೇಳೈಸಿವೆ. ನಾಡಿನ ವೈವಿಧ್ಯಮಯ ಸಂಸ್ಕೃತಿ, ಸಂಪ್ರದಾಯ ಮತ್ತು ಜನಪದ ಪರಂಪರೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಇಂತಹ ಕಾರ್ಯಕ್ರಮಗಳು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ.






