ಬೆಂಗಳೂರು:- ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ವರದಿಯಾಗಿದೆ.
ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿ ಚಂದನಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪ್ರಾಶನ ಮಾಡಿದ್ದ ಚಂದನಾರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಕನ್ನಡ ಕಿರುತೆರೆ, ಜಾಹೀರಾತು, ಚಲನಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಚಂದನಾ ಸಾವಿಗೆ ಆಪ್ತರು, ಬಂಧುಮಿತ್ರರು ಕಂಬನಿ ಮಿಡಿದಿದ್ದಾರೆ.
ವಿಷ ಸೇವನೆ ಸೆಲ್ಫಿ ವಿಡಿಯೋ ಮಾಡಿರುವ ಚಂದನಾ ಅವರು ತಮ್ಮ ಪ್ರಿಯಕರ ದಿನೇಶ್ ಎಂಬುವರ ಮೇಲೆ ಆರೋಪ ಮಾಡಿದ್ದಾರೆ. ದಿನೇಶ್ ಅವರು ಸದ್ಯ ನಾಪತ್ತೆಯಾಗಿದ್ದಾರೆ