ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲ್ಪಟ್ಟಿದ PUC ಹಾಗೂ SSLC ನಡೆಸಲು ಮುಂದಾಗಿದ್ದುPUC ಪರೀಕ್ಷೆಯನ್ನು ಜೂನ್18 ಹಾಗೂ SSLC ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ನಡೆಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು. ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಯಲಿದೆ. ಈ ಕುರಿತು ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರೌಢ ಶಿಕ್ಷಣ ಸಚಿವಸುರೇಶ್ ಕುಮಾರ್, ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ.
ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು. ವಲಸೆ ಕಾರ್ಮಿಕರ, ಹಾಸ್ಟೆಲ್ ವಿದ್ಯಾರ್ಥಿಗಳ ಮಕ್ಕಳಿಗೆ ಪರೀಕ್ಷೆ ಬರೆಯಲಿ ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶವಿದೆ ಈ ಬಗ್ಗೆ ಮೇ 25ರ ಮೊದಲಾಗಿ ಸಂಬಂಧಿಸಿದ ಶಿಕ್ಷಣಾಧಿಕಾರಿಯವರಲ್ಲಿ ನೊಂದಾವಣೆ ಮಾಡುವುದು.
ಡಿಡಿ ಚಂದನದಲ್ಲಿ ಮಾದರಿ ಪ್ರಶ್ನೆ ಪ್ರತ್ರಿಕೆಗೆ ಉತ್ತರ ನೀಡುವ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದರು.