ಬೆಳ್ತಂಗಡಿ:- ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಲಾಯಿಲ ಗ್ರಾಮದ ಕುಂಟಿನಿಯಲ್ಲಿ ತೀವ್ರ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಗೃಹೋಪಯೋಗಿ ಸಾಮಾಗ್ರಿ ಮಿಕ್ಸಿ ಹಾಗೂ ಅಕ್ಕಿಯನ್ನು ನೀಡಲಾಯಿತು. ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ರಾವ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಸುರೇಶ ಶೆಟ್ಟಿ, ತುಕಾರಾಂ ಉಪಸ್ಥಿತರಿದ್ದರು. ವರ್ಷದುದ್ದಕ್ಕೂ ಸೇವಾಪಥ ಕಾರ್ಯಕ್ರಮದಡಿ ಅನೇಕ ಸಮಾಜಮುಖಿ ಕೆಲಸಗಳು ಯಶ್ವಸಿಯಾಗಿ ಸಂಪನ್ನಗೊಂಡಿದೆ.
ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…