SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲು ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಅಲ್ಲದೇ ಡಿಡಿಪಿಐಗಳಿಗೆ ಸಚಿವರೇ ಖುದ್ದು ಸೂಚನೆ ನೀಡಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶವನ್ನು ಸಡಿಲ ಮಾಡಲಾಗಿದೆ. ಮೇ 17ರಂದು ಮೂರನೇ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳಲಿದೆ. ಹೀಗಾಗಿ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಸದ್ಯದಲ್ಲಿಯೇ ನಡೆಸಲು ಚಿಂತನೆ ನಡೆಸಲಾಗಿದೆ.

ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲಾ ಜಿಲ್ಲೆಗಳ ಡಿಡಿಪಿಐಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದ್ದಾರೆ. ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತ ಸುರೇಶ್ ಕುಮಾರ್ ಅವರು ಸೂಚನೆಯನ್ನು ನೀಡಿದ್ದಾರೆ.

ಪ್ರತೀ ಪರೀಕ್ಷಾ ಕೊಠಡಿಗಳಲ್ಲಿ ಕೇವಲ 24 ವಿದ್ಯಾರ್ಥಿಗಳಿಗೆ ಮಾತ್ರವೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಹೀಗಾಗಿ ಹೆಚ್ಚುವರಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷಾ ಕೊಠಡಿಗಳಲ್ಲಿ ಪ್ರತೀ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಗೆ ಒಳಪಡಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು. ಇನ್ನು ಕಂಟೈನ್ಮೆಂಟ್ ಪರೀಕ್ಷಾ ಕೇಂದ್ರಗಳನ್ನು ಶೀಪ್ಟ್ ಮಾಡುವಂತೆ ಸೂಚನೆ ನೀಡಲಾಗಿದೆ.

ಮಾಸ್ಕ್ , ಸ್ಯಾನಿಟೈಜರ್ ಹಾಗೂ ಜ್ವರ ತಪಾಸಣೆ ಕಡ್ಡಾಯ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಒದಗಿಸಿ ಥರ್ಮಲ್ ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಯಾವುದೇ ವಿದ್ಯಾರ್ಥಿಯೂ ನೆಲದ ಮೇಲಾಗಲೀ, ಬಯಲಿನಲ್ಲಾಗಲೀ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದ ಸಚಿವರು, ಅಗತ್ಯವಾದ ಡೆಸ್ಕ್, ಬೆಂಚ್ ಗಳನ್ನು ಅಸುಪಾಸಿನ ಶಾಲೆಗಳಿಂದ ಸಂಗ್ರಹಿಸಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಪರೀಕ್ಷಾ ವಾತಾವರಣವನ್ನು ಕಲ್ಪಿಸಬೇಕೆಂದು ಸಲಹೆ ನೀಡಿದರು.


ಆಂಗ್ಲ ಮಾಧ್ಯಮ ಪುನರ್ಮನನ ತರಗತಿಗಳ ಪ್ರಾರಂಭ : ಶಿಕ್ಷಣ ಇಲಾಖೆ ಚಂದನ ವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ನಡೆಸುತ್ತಿದ್ದು, ಈ ವಾರದಿಂದಲೇ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೂ ಪುನರ್ಮನನ ತರಗತಿಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಲಾಖೆಯ ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್ ನಲ್ಲಿಯೂ ಸಹ ಪುನರ್ಮನನ ತರಗತಿಗಳು ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಎಸ್ಎಸ್ ಎಲ್ ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಅನುಮಾನ ಗಳಿದ್ದರೆ ಪರೀಕ್ಷೆ ಇಷ್ಟರಲ್ಲೇ ನಡೆಯಲಿದೆ ಎಂಬ ಕುರಿತು ಮಕ್ಕಳಿಗೆ ಮತ್ತು ಪೋಷಕರಿಗೆ ಮನವರಿಕೆ ಮಾಡಬೇಕೆಂದು ಸಚಿವರು ಡಿಡಿಪಿ ಐಗಳಿಗೆ ಸೂಚಿಸಿದರು.


ಪರೀಕ್ಷೆ ಸಿದ್ಧತೆಗೆ ಸಮಯ: ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು ವಿಷಯವಾರು ಅವಶ್ಯಕ ಅಂತರವನ್ನು ಕಾಪಾಡಿಕೊಳ್ಳಲು ಯೋಜನೆ ರೂಪಿಸಬೇಕೆಂದು ಇಲಾಖಾ ಆಯುಕ್ತರಿಗೆ ಸೂಚಿಸಿದ ಸುರೇಶ್ ಕುಮಾರ್, ಈಗಾಗಲೇ ಬೇರೆ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಅವರು ಪ್ರಸ್ತುತ ಇರುವ ಸ್ಥಳಗಳಲ್ಲಿಯೇ ಹತ್ತಿರದ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕೆಂದು ಸೂಚಿಸಿದರು.
ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆ ಕುರಿತು, ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆ ಪತ್ರಿಕೆ-ಉತ್ತರ ಪತ್ರಿಕೆ ವಿನಿಮಯ, ಸಹಾಯವಾಣಿ ಮೂಲಕ ಸಂದೇಹಗಳ ನಿವಾರಣೆ, ಸ್ಥಳೀಯ ರೇಡಿಯೋ ಕೇಬಲ್ ಟಿವಿ ಚಾನೆಲ್ ಗಳ ಮೂಲಕ ಬೋಧನಾ ಪ್ರಕ್ರಿಯೆ ನಿರ್ವಹಣೆ ಸೇರಿದಂತೆ ಇಲಾಖೆಯ ಜಿಲ್ಲಾ ಆಡಳಿತಗಳ ಹಲವಾರು ಉಪಕ್ರಮಗಳನ್ನು ಶ್ಲಾಘಿಸಿದ ಸಚಿವರು, ಪರೀಕ್ಷೆಗಳನ್ನುತುಂಬಾ ಆತ್ಮವಿಶ್ವಾಸದಿಂದ ಎದುರು ನೋಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಇದೇ ರೀತಿಯ ಭರವಸೆ ಮೂಡಿಸುವ ಪ್ರಯತ್ನಗಳು ಪರೀಕ್ಷಾ ಪಕ್ರಿಯೆ ಪೂರ್ಣಗೊಳ್ಳುವವರೆಗೆ ನಿರಂತರವಾಗಿ ಜಾರಿಯಲ್ಲಿರಲಿ ಎಂದು ಸೂಚಿಸದರು.

Spread the love
  • Related Posts

    ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ

    ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, 2025-26 ನೇ ಶೈಕ್ಷಣಿಕ ವರ್ಷದ ಪ್ರಥಮ”ಪೋಷಕರ ಸಭೆ” ದಿನಾಂಕ 03-07-2025 ಶಾಲೆಯ ಸಭಾಂಗಣದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ ನಂದ ಇವರ ಅಧ್ಯಕ್ಷತೆಯಲ್ಲಿ…

    Spread the love

    ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ವಿದ್ಯಾರ್ಥಿಗಳ ನಾಯಕಿಯಾಗಿ ಕುಮಾರಿ ಅನನ್ಯ ಮತ್ತು ಉಪ ನಾಯಕನಾಗಿ ಕುಮಾರ್ ಸುಹಾಸ್ ಆಯ್ಕೆ

    ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಜರಗಿತು. ಈ ಕಾರ್ಯಕ್ರಮವು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಅವರ ನೇತೃತ್ವದಲ್ಲಿ ನಡೆಯಿತು. ಹೊಸದಾಗಿ ಆಯ್ಕೆಯಾದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 18 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 43 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 38 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ