
ಬೆಳ್ತಂಗಡಿ: 2025 ಹೊಸ ಕ್ಯಾಲೆಂಡರ್ ವರ್ಷವನ್ನು ಬರಮಾಡಿಕೊಳ್ಳುವ ಸುಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರು ವಿಶೇಷವಾಗಿ ಹೂವಿನ ಅಲಂಕಾರ ಮಾಡಿದ್ದಾರೆ.

ಬೆಂಗಳೂರಿನ ಟಿವಿಎಸ್ ಕಂಪೆನಿ ಉದ್ಯಮಿ ಗೋಪಾಲ್ ರಾವ್ ಹಾಗೂ ಆನಂದ ಮೂರ್ತಿ ಅವರ ತಂಡವು ದೇಗುಲ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಬೀಡು, ಅನ್ನಛತ್ರ ಸಹಿತ ಮುಂಭಾಗ, ಒಳಾಂಗಣ, ಹೊರಾಂಗಣ, ಗೋಪುರ, ಮುಖಮಂಟಪವನ್ನು ಸಂಪೂರ್ಣವಾಗಿ ಸಿಂಗರಿಸಿದ್ದಾರೆ.

ಡಿ. 25ರಿಂದ 80 ಮಂದಿಯ ತಂಡವು ಸತತವಾಗಿ ಅಲಂಕಾರದಲ್ಲಿ ತೊಡಗಿದ್ದು, ಈ ಬಾರಿ ಮುಂಭಾಗವನ್ನು ಆದಿಯೋಗಿ ಪ್ರತಿಮೆಯೊಂದಿಗೆ ಅತ್ಯದ್ಭುತವಾಗಿ ಸಿದ್ಧಗೊಳಿಸಲಾಗಿದೆ.

16 ವರ್ಷಗಳಿಂದ ಈ ತಂಡ ಅಲಂಕಾರ ಮಾಡುತ್ತಿದ್ದು, ಪ್ರಸಕ್ತ ವರ್ಷ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕರಿಸಲಾಗಿದೆ. ಸ್ವದೇಶಿ, ವಿದೇಶಿ ಹೂವುಗಳು, ಅಡಿಕೆ, ಭತ್ತದ ತೆನೆ, ಹೊಂಬಾಳೆ, ದಾಳಿಂಬೆ, ತೆಂಗಿನಕಾಯಿ, ಬಾಳೆಹಣ್ಣು, ಮೂಸಂಬಿ, ಕಬ್ಬು ಸಹಿತ 1 ಟನ್ ಹಣ್ಣು ಬಳಸಲಾಗಿದೆ.
