ಮಂಗಳೂರು: ರಾಜ್ಯ ಸರಕಾರವು ಕರಾವಳಿಯ 5 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಯಾಗಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು.
🔹ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಯ್ಕ್ ಜಿ. ಯವರನ್ನು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಚೆಲುವಯ್ಯ ಅವರು ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
🔸ಉಡುಪಿ ನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸದಾಶಿವ ರಾಮಪ್ಪ ಗವರೋಜರನ್ನು ಕುಂದಾಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
🔹ಕುಂದಾಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹರೀಶ್ ಆರ್ ರನ್ನು ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
🔸ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೌನೇಶ್ ರನ್ನು ಚಿಕ್ಕಮಗಳೂರು ನಗರ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.
🔹ಉತ್ತರ ಕನ್ನಡ ಜಿಲ್ಲೆಯ ಡಿ.ಎಸ್.ಬಿ ತಟ್ಟಿಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಯಶ್ರೀ ಶಾನಭಾಗರನ್ನು ಶಿರಸಿ ಹೊಸಮಾರುಕಟ್ಟೆ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.