ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ

✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ

ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ ಶಕ್ತಿ ಸೌಧದಲ್ಲೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದಲ್ಲದೆ, ಪ್ರಭಾವಿ ರಾಜಕಾರಣಿಗಳು ಕೂಡ ಮಾಡಿದ ತಪ್ಪಿನ ಪ್ರಾಯಶ್ಚಿತಕ್ಕಾಗಿ ಜೈಲುವಾಸ ಅನುಭವಿಸಿ ಹೊರಬಂದಿರುವುದು ಹಳೆ ಕಥೆಯಾದರೆ,ಈ ಬಾರಿ ಸದ್ದು ಮಾಡುತ್ತಿರುವುದು ಅಕ್ರಮ ಕಲ್ಲು ಗಣಿಗಾರಿಕೆಯ ವಿಚಾರ.

ಅಕ್ರಮ ಕಲ್ಲು ಗಣಿಗಾರಿಕೆಯ ತೀವ್ರತೆ ಎಷ್ಟರಮಟ್ಟಿಗೆ ವ್ಯಾಪಿಸಿದೆಯೆಂದರೆ ಕಳೆದ ವರ್ಷ ಗ್ರಾಮೀಣ ಭಾಗದ ಸರಕಾರಿ ಶಾಲೆಯೊಂದರ ಅಣತಿ ದೂರದಲ್ಲಿ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಗಣಿಗಾರಿಕೆ ನಡೆಸಿರುವುದರಿಂದ ಇದರ ತೀವ್ರತೆಗೆ ಶಾಲೆಯೇ ಅದುರಿ ಹೋಗಿ ವಿದ್ಯಾರ್ಥಿಗಳು ಆತಂಕದಲ್ಲೇ ಪಾಠ ಆಲಿಸಬೇಕಾದ ಸಂದಿಗ್ಧ ಸ್ಥಿತಿ ಬಂದೊದಗಿತ್ತು. ಗಂಭೀರತೆ ಅರಿತ ಮುಖ್ಯೋಪಾಧ್ಯಾಯರು ಸಂಬಂಧಪಟ್ಟವರಿಗೆ ದೂರು ಸಲ್ಲಿಸಿದ ಬೆನ್ನಲ್ಲೇ ದಂಧೆಯಲ್ಲಿ ತೊಡಗಿದ್ದ ಪ್ರಭಾವಿ ವ್ಯಕ್ತಿಗಳಿಂದ ಮತ್ತು ಗೂಂಡಾಗಳಿಂದ ಜೀವಬೆದರಿಕೆ ಎದುರಿಸಬೇಕಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಗುಡ್ಡಪ್ರದೇಶದ ಮೇಲಿರುವ ಇತಿಹಾಸ ಪ್ರಸಿದ್ಧ ಭೂಕೈಲಾಸನಾಥ ಪ್ರತೀತಿಯ ಕಾರೀಂಜೇಶ್ವರ ದೇವಾಲಯದ ಬಳಿ ಜಿಲೆಟಿನ್ ಬಳಸಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದರಿಂದ ಇದರ ಸ್ಪೋಟಕ್ಕೆ ದೇವಾಲಯದ ಸುತ್ತಮುತ್ತ ಬಿರುಕು ಉಂಟಾಗಿ ದೇವಾಲಯದ ಸ್ಥಿತಿ ಆತಂಕದಲ್ಲಿತ್ತು. ಮಂಡ್ಯ ಜಿಲ್ಲೆಯ ಮದ್ದೂರು, ಚಂದಳ್ಳಿ,ಕೋಳಿಗುಡ್ಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುವ ಈ ಕಲ್ಲು ಗಣಿಗಾರಿಕೆಯಿಂದ ಸುಂದರ ಇತಿಹಾಸ ಪ್ರಸಿದ್ಧ ಬೆಟ್ಟಗುಡ್ಡಗಳು ಬಗೆದು ನೆಲಸಮಗೊಂಡಿರುವುದು ಒಂದೆಡೆಯಾದರೆ ನದಿಗಳು ಮಲೀನಗೊಳ್ಳುವುದು, ಸ್ಫೋಟಕ್ಕೆ ರಾಸಾಯನಿಕ ವಸ್ತುಗಳ ಬಳಕೆಯಿಂದ ಧೂಳು ಮುಂತಾದ ಕಾರಣಕ್ಕೆ ಕೃಷಿ ಚಟುವಟಿಕೆಗಳಿಗೆ ಹಾನಿಯಾಗುತ್ತಿರುವುದು ಕಂಡು ಬರುತ್ತಿದೆ.

ದಾವಣಗೆರೆ ಜಿಲ್ಲೆಯಲ್ಲೂ ಪ್ರಭಾವಿ ರಾಜಕಾರಣಿಯೋರ್ವರ ಪುತ್ರ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದು, ಇವುಗಳ ಪೈಕಿ ಗುತ್ತಿಗೆ ಪಡೆದುಕೊಂಡಿದ್ದರೂ ಫಹಣಿಯಲ್ಲಿ ನಮೂದಾಗದಿರುವುದು ಅಕ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ದಂಧೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದು, ಕೆಲ ಜಿಲ್ಲಾಡಳಿತ, ಅರಣ್ಯ, ಕಂದಾಯ, ಗಣಿ ಇಲಾಖೆಗಳ ನೆರಳಿನಡಿಯಲ್ಲೇ ಸಾಗಿ ಇಲಾಖೆಗಳು ಕಣ್ಣಿದ್ದೂ ಕುರುಡಾಗುತ್ತಿವೆ. ಪ್ರಕೃತಿದತ್ತವಾಗಿ ಸಿಗುವ ಸಂಪನ್ಮೂಲಗಳಾದ ಕಾಡು ಭೂಮಿ, ನದಿ,ಕೆರೆ ಇವುಗಳನ್ನು ಒತ್ತುವರಿ ಮಾಡಿಕೊಂಡು ರಾಜಕಾರಣಿಗಳು ಇದ್ಯಾವುದನ್ನೂ ಬಿಡುತ್ತಿಲ್ಲ. ದೂರದ ತಮಿಳುನಾಡು, ಆಂಧ್ರಪ್ರದೇಶ,ಬಿಹಾರ ಸೇರಿದಂತೆ ಹೊರಜಿಲ್ಲೆಯ ಕಾರ್ಮಿಕರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಸ್ಪೋಟ ನಡೆಸುವಂತಹ ಅಪಾಯಕಾರಿ ಕಾರ್ಯಗಳಿಗೆ ಬಳಸಿಕೊಂಡು ತಮ್ಮ ಆಯುಷ್ಯವನ್ನು ಇಲ್ಲೇ ಕಳೆದುಕೊಳ್ಳುವ ಕಾರ್ಮಿಕರು ಜೀವನಭದ್ರತೆಯಿಲ್ಲದೆ ಸ್ಪೋಟಕ್ಕೆ ಸಾವನ್ನಪ್ಪಿದ ನೂರಾರು ನಿದರ್ಶನಗಳಿವೆ.

ಇದಕ್ಕೆ ಪೂರಕವೆಂಬಂತೆ ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ ಹುಣಸೋಡು ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ನಡೆದ ದುರಂತವೇ ಸಾಕ್ಷಿ. ಈಗಾಗಲೇ ಹಲವೆಡೆ ನಡೆಯುತ್ತಿರುವ ಕಾನೂನು ಬಾಹಿರ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ ಮತ್ತು ಎಲ್ಲೆಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆಯೋ ಅದನ್ನು ತಡೆಯಲು ಬಿಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ತಿಳಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕಾದ ಹೊಣೆ ರಾಜ್ಯ ಸರಕಾರದ ಮೇಲಿದೆ. ಇಂತಹ ಚಟುವಟಿಕೆಯ ಹೆಸರಿನಲ್ಲಿ ನಡೆಯುವ ಗೂಂಡಾಗಿರಿ,ರೌಡಿಸಂ ಚಟುವಟಿಕೆಗಳಿಗೂ ಸರಕಾರ ಕಡಿವಾಣ ಹಾಕುವುದರೊಂದಿಗೆ ಅಪರಾಧ ಹಿನ್ನೆಯುಳ್ಳವರಿಗೆ ಇಂತಹ ಚಟುವಟಿಕೆಗಳಿಗೆ ಪರವಾನಗಿ ನೀಡದೆ, ಪ್ರಕೃತಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟವುಂಟುಮಾಡುವ, ಪ್ರಾಣ ಹಾನಿ ಉಂಟು ಮಾಡುವ ಸ್ಪೋಟಕ ಬಳಕೆಗೆ ಸರಕಾರ ಅಗತ್ಯ ಕಡಿವಾಣ ಹಾಕಬೇಕಾಗಿದೆ.


Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 11 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ